More

    ವರ್ಷಾಂತ್ಯದೊಳಗೆ ರಾಯಣ್ಣ ಶಾಲೆ ಕಾರ್ಯಾರಂಭ ಬೆಳಗಾವಿ

    ಬೆಳಗಾವಿ: ವರ್ಷಾಂತ್ಯದೊಳಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಶಾಲೆ ಕಾರ್ಯಾರಂಭ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
    ಆಂಜನೇಯ ನಗರದಲ್ಲಿ ಬುಧವಾರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ ರಾಯಣ್ಣ ಸೈನಿಕ ಶಾಲೆ ನಿರ್ಮಿಸಲಾಗಿದ್ದು, ಈ ವರ್ಷವೇ ಆರಂಭವಾಗಲಿದೆ. ಅಲ್ಲದೆ, ಖಾನಾಪುರ ತಾಲೂಕಿನ ನಂದಗಡದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಯಣ್ಣ ಮ್ಯೂಸಿಯಂ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

    ವಿದ್ಯಾರ್ಥಿ ಜೀವನ ಬಹಳ ಮಹತ್ವವಾದುದು ಹಾಗೂ ಅಮೂಲ್ಯವಾದ ಜೀವನ. ಅದು ಮತ್ತೆ ಮತ್ತೆ ಸಿಗುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಶಿಣ ಪಡೆದು ನಿರಂತರ ಪ್ರಯತ್ನದಿಂದ ಸಾಧನೆ ಮಾಡಬೇಕು. ಯಾವುದೇ ಸಮಸ್ಯೆ ಎದುರಾದಾಗ ಚಿಂತನೆ ನಡೆಸಿ ನಿಮ್ಮ ಯೋಚನಾ ಶಕ್ತಿಯ ಮೂಲಕ ಏಕಾಗ್ರತೆಯಿಂದ ವಿದ್ಯಾಭ್ಯಾಸಕ್ಕೆ ಗಮನ ಕೊಡಬೇಕು. ರಾಯಣ್ಣನ ದೇಶಪ್ರೇಮ, ತ್ಯಾಗ&ಬಲಿದಾನ ಎಲ್ಲವೂ ವಿದ್ಯಾರ್ಥಿಗಳಿಗೆ ಪ್ರೇರಣೆ ಆಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಉನ್ನತ ಶಿಣ ಸಚಿವ ಡಾ.ಸಿ.ಎನ್​.ಅಶ್ವತ್ಥ ನಾರಾಯಣ ಮಾತನಾಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಗಳ ಸಂಖ್ಯೆ ಹೆಚ್ಚಿಸಬೇಕು. ಮಹಾನಗರ ಪಾಲಿಕೆ ಯಿಂದ 1 ಎಕರೆ ಜಾಗ ನೀಡಿದರೆ, ಈ ಕಾಲೇಜು ಬೆಳಗಾವಿಯಲ್ಲಿ ಶೈಣಿಕ ಕ್ರಾಂತಿ ಮಾಡಲಿದೆ. ಬೆಳಗಾವಿಯ ಬಾಗೇವಾಡಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವ ವಿದ್ಯಾಲಯದ ಕ್ಯಾಂಪಸ್​ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಿರ್ವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

    ಶಾಸಕ ಅನಿಲ ಬೆನಕೆ ಮಾತನಾಡಿ, ಮಹಾವಿದ್ಯಾಲಯಕ್ಕೆ ಬೇಕಾದ ಹೆಚ್ಚುವರಿ ಒಂದು ಎಕರೆ ಜಮೀನು ಒದಗಿಸಲು ಕ್ರಮ ವಹಿಸಲಾಲಾಗುವದು. ವಿದ್ಯಾರ್ಥಿಗಳಿಗೆ ಅಗತ್ಯ ಬಸ್​ ಸೌಲಭ್ಯ ಒದಗಿಸುವುದರ ಜತೆಗೆ ಕಾಲೇಜಿಗೆ ಬೇಕಾದ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.

    ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್​ ಸದಸ್ಯರಾದ ಹಣಮಂತ ನಿರಾಣಿ, ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರ ಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts