More

    ವಲ್ನ್ನರಬಲ್, ಸೂಕ್ಷ್ಮ ಮತಗಟ್ಟೆಗಳ ಸಮೀಕ್ಷೆ  ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಸೂಚನೆ 

    ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣೆಯನ್ನು ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಂಬಂಧ, ಜಿಲ್ಲೆಯಲ್ಲಿನ ವಲ್ನ್ನರಬಲ್ ಹಾಗೂ ಸೂಕ್ಷ್ಮ ಮತಗಟ್ಟೆಗಳ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
    ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರವಿದೆ. ಹಿಂದಿನ ಚುನಾವಣೆ ವೇಳೆ ನಡೆದ ಗುಂಪು ಘರ್ಷಣೆ ಮತ್ತು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳನ್ನು ಆಧರಿಸಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಶಾಂತಯುತ ಮತದಾನಕ್ಕೆ ಅಗತ್ಯ ಕ್ರಮ ವಹಿಸಬೇಕಿದೆ. ತಹಸೀಲ್ದಾರರು ಕೂಲಂಷ ಪರಿಶೀಲಿಸಿ ವರದಿ ನೀಡಬೇಕೆಂದು ಸೂಚನೆ ನೀಡಿದರು.
    ಎಲ್ಲಾ ತಹಸೀಲ್ದಾರರು ಪ್ರತಿ ಮತಗಟ್ಟೆಗಳನ್ನು ಪರಿಶೀಲನೆ ನಡೆಸಿ ನ್ಯಾಯ ಸಮ್ಮತ, ಶಾಂತಯುತ ಚುನಾವಣೆ ನಡೆಸಲು ಬೇಕಾದ ಸಿದ್ಧ್ದತೆಗಳ ಕುರಿತಂತೆ ತಕ್ಷಣವೇ ವರದಿ ಮಾಡುವಂತೆಯೂ ಡಿಸಿ ತಿಳಿಸಿದರು.
    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಜಿಪಂ ಸಿಇಒ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ದಾವಣಗೆರೆ ಉಪವಿಭಾಗಾಧಿಕಾರಿ ದುರ್ಗಾಶ್ರೀ ಇತರೆ ಅಧಿಕಾರಿಗಳಿದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts