More

    ವಸತಿ ನಿಲಯ ಕಾರ್ಮಿಕರಿಗೆ ಬಾಕಿ ವೇತನ ಪಾವತಿಸಿ

    ರಾಯಚೂರು: ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಳೆದ 11 ತಿಂಗಳಿಂದ ಬಾಕಿ ಇರುವ ವೇತನ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿಯೋಗ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ ಪೋತದಾರ್‌ಗೆ ಮಂಗಳವಾರ ಮನವಿ ಸಲ್ಲಿಸಿದರು.

    ಇಲಾಖೆಯಿಂದ ನಡೆಸಲಾಗುವ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹಲವು ತಿಂಗಳಿಂದ ವೇತನವಿಲ್ಲದೆ ಕುಟುಂಬ ನಿರ್ವಹಣೆಗೆ ಪರದಾಡುವಂತಾಗಿದೆ. ಅಡುಗೆ ಸಹಾಯಕರು, ಕಾವಲುಗಾರರು, ಪತ್ರಾಂಕಿತ ಬರಹಗಾರರು ಸೇರಿ ಇತರ ಕಾರ್ಮಿಕರಿಗೆ ಕಳೆದ 11 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಕಾರ್ಮಿಕರು ಕುಟುಂಬ ನಿರ್ವಹಣೆಗಾಗಿ ಸಾಲ ಮಾಡುವಂತಾಗಿದೆ. ಮಕ್ಕಳ ಶಾಲಾ ಶುಲ್ಕ ನೀಡಲಾಗದೆ ಶಾಲೆ ಬಿಡಿಸುವಂತೆ ಸ್ಥಿತಿ ಎದುರಾಗಿದೆ.

    ಕೂಡಲೇ ಬಾಕಿ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ತಿಂಗಳು ನಿಯಮಿತವಾಗಿ ವೇತನ ಪಾವತಿಯಾಗುವಂತೆ ನೋಡಿಕೊಳ್ಳುವುದೂ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

    ನಿಯೋಗದಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಎಂ.ಈರಣ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಿ, ಪದಾಧಿಕಾರಿಗಳಾದ ಮಹಾದೇವಪ್ಪ, ಎಸ್.ಪ್ರಸಾದ ಹಾಗೂ ವಸತಿ ನಿಲಯ ಕಾರ್ಮಿಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts