More

    ವಸತಿ ಶಾಲೆಗಳಲ್ಲಿ ಪಿಯುಗೆ ಅನುಮತಿ ಶೀಘ್ರ

    ವಿಜಯವಾಣಿ ಸುದ್ದಿಜಾಲ ರಟ್ಟಿಹಳ್ಳಿ

    ತಾಲೂಕಿನ ಮೂರು ವಸತಿ ಶಾಲೆಗಳಲ್ಲಿ ಪದವಿಪೂರ್ವ ಶಿಕ್ಷಣ ಬೋಧಿಸಲು ಶೀಘ್ರ ಅನುಮತಿ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ತಾಲೂಕಿನ ಕುಡುಪಲಿ ಗ್ರಾಮದಲ್ಲಿ ಇಂದಿರಗಾಂಧಿ ವಸತಿ ಶಾಲೆಯ ನೂತನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಮಾಜಿ ಸಿಎಂ ದೇವರಾಜ ಅರಸ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಸತಿ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ 250 ಕೋಟಿ ರೂ., ಅನುದಾನ ಬಿಡುಗಡೆ ಮಾಡಿದ್ದಾರೆ. ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ವಸತಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ರಟ್ಟಿಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದಲ್ಲಿ ಸುಸಜ್ಜಿತ ನೂತನ ವಸತಿ ನಿಲಯಗಳ ಕಟ್ಟಡ ಆರಂಭಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ ಕಾರಣೀಕರ್ತರು. ಅಂಬೇಡ್ಕರ್ ಸಮುದಾಯ ಭವನ ಮತ್ತು ಹಡಪದ ಸಮಾಜದ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಲಾಗುವುದು ಎಂದರು. ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಕುಡುಪಲಿ ಗ್ರಾಮಸ್ಥರ ಸಹಕಾರದಿಂದ ಸುಸಜ್ಜಿತ ವಸತಿ ಶಾಲೆ ಪ್ರಾರಂಭವಾಗಿದೆ. ದಿಟ್ಟ ನಿರ್ಧಾರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ಮತ್ತೆ ನಿಮ್ಮೆಲ್ಲರ ಆರ್ಶೀವಾದದಿಂದ ಗೆದ್ದು ಸಚಿವ ಸ್ಥಾನ ಅಲಂಕರಿಸಿದ್ದರಿಂದ ತಾಲೂಕಿಗೆ ಕೋಟ್ಯಂತರ ರೂಪಾಯಿ ಅನುದಾನ ಮಂಜೂರಾಗಿದೆ ಎಂದರು. ತಾಲೂಕಿಗೆ ಅವಶ್ಯವಿರುವ ಪಿಯು ವಸತಿ ಶಾಲೆಗಳ ಶಿಕ್ಷಣಕ್ಕೆ ಅನುಮತಿ ಸೇರಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಗಿದ್ದು, ಶೀಘ್ರವೇ ಈಡೇರಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, 4 ವರ್ಷ ಇಂದಿರಗಾಂಧಿ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿ ಮೂಲಸೌಕರ್ಯಗಳ ಸಮಸ್ಯೆ ಕೊರತೆಯಲ್ಲಿತ್ತು. ಪ್ರಸ್ತುತ ಸುಸಜ್ಜಿತ ಕಟ್ಟಡ ನಿರ್ವಿುಸಲಾಗಿದೆ ಎಂದರು.

    ಧಾರವಾಡ ಹಾಲು ಒಕ್ಕೂಟ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಡಿ.ಸಿ. ಪಾಟೀಲ, ಹೆಸ್ಕಾಂ ನಿರ್ದೇಶಕ ಮಹೇಶ ಗುಬ್ಬಿ, ಮಾಲತೇಶ ಗಂಗೋಳ, ಜೆ.ಪಿ. ಪ್ರಕಾಶ, ಆರ್.ಎನ್. ಗಂಗೋಳ, ದೇವರಾಜ ನಾಗಣ್ಣನವರ, ವೀರನಗೌಡ್ರ ಮಕರಿ, ಕುಡುಪಲಿ ಗ್ರಾಪಂ ಅಧ್ಯಕ್ಷೆ ನಿರ್ಮಲಾ ಹೊಸಕುರುಬರ, ಗುತ್ತಿಗೆದಾರ ರಘುನಾಥ ರಾಮರೆಡ್ಡಿ, ಬಸನಗೌಡ ಕರೇಗೌಡ್ರ, ರಾಘವೇಂದ್ರ ಹರವಿಶೆಟ್ಟರ್, ವಿಜಯ ಅಂಗಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಜಗದೀಶ ಹೆಬ್ಬಳ್ಳಿ, ಪಿಡಿಒ ಪ್ರಕಾಶ ಸುಂಕಾಪುರ, ಕುಡುಪಲಿ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಪ್ರಾಂಶುಪಾಲ ರಾಜುಗೌಡ ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts