More

    ವಸ್ತು ಖರೀದಿ ಮುನ್ನ ಎಚ್ಚರವಿರಲಿ

    ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ವಿದ್ಯಾವಂತ ಯುವಕರನ್ನೂ ಹಾದಿ ತಪ್ಪಿಸುವ ಜಾಹೀರಾತುಗಳು ಬರುತ್ತಿದ್ದು, ಜಾಗ್ರತೆ ವಹಿಸಿ ವಸ್ತುಗಳನ್ನು ಖರೀದಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಮುರಳೀಮೋಹನ್ ರೆಡ್ಡಿ ತಿಳಿಸಿದರು.

    ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಕಾನೂನು ಮಾಪನ ಶಾಸ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ (ಡಿ.ಸಿ.ಐ.ಸಿ) ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ದೇಶದಲ್ಲಿ ಯಾವುದೇ ಕಂಪನಿ ವಸ್ತುಗಳನ್ನು ಉಚಿತವಾಗಿ ಕೊಡುವುದಿಲ್ಲ, ಆದ್ದರಿಂದ ಯಾವುದೇ ಜಾಹೀರಾತು ಹಾಗೂ ಅಪರಿಚಿತ ಲಿಂಕ್‌ಗಳ ಮೂಲಕ ವಸ್ತುಗಳನ್ನು ಖರೀದಿಸದೆ ಸಂಪೂರ್ಣ ಮಾಹಿತಿ ತಿಳಿದು ನಂತರ ಅಗತ್ಯ ವಸ್ತುಗಳನ್ನು ಖರೀದಿಸಬೇಕು ಎಂದರು.

    ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುನಂದ ಎಸ್. ಕಾದ್ರೊಳ್ಳಿಮಠ ಮಾತನಾಡಿ, ಗ್ರಾಹಕರು ಯಾವುದೇ ವಸ್ತು ಖರೀದಿಸುವ ಮುನ್ನ ಅದರ ಗುಣಮಟ್ಟ, ಯೋಗ್ಯ ಬೆಲೆ ಕೂಲಂಕಷವಾಗಿ ಪರೀಕ್ಷಿಸಿ ಖರೀದಿಸಬೇಕು. ಜೊತೆಗೆ ಕಡ್ಡಾಯವಾಗಿ ರಸೀದಿ (ಬಿಲ್) ಪಡೆದುಕೊಳ್ಳಬೇಕು ಎಂದು ಹೇಳಿದರು.

    ಜಿಲ್ಲಾ ಗ್ರಾಹಕರ ಸಂಘದ ಅಧ್ಯಕ್ಷ ಎನ್.ಆರ್. ಲಾತೂರ ಮಾತನಾಡಿ, ಇ- ಕಾಮರ್ಸ್ ಮತ್ತು ಡಿಜಿಟಲ್ ಯುಗದಲ್ಲಿ ಆನ್‌ಲೈನ್ ವ್ಯವಹಾರದಿಂದ ಸಮಯ ಉಳಿತಾಯ ಮಾಡುವಭರದಲ್ಲಿ ಹೆಚ್ಚಿನ ಸಮಸ್ಯೆಗಳಿಗೆ ಸಿಲುಕಿ ಗ್ರಾಹಕರು ಆರ್ಥಿಕ ನಷ್ಟಕ್ಕೆ ಅನುಭವಿಸಿ ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳಿವೆ. ಆದ್ದರಿಂದ ಗ್ರಾಹಕರು ವಸ್ತು ಖರೀದಿಸುವಾಗ ಹೆಚ್ಚಿನ ಗಮನ ಹರಿಸುವುದು ಅವಶ್ಯ ಎಂದು ತಿಳಿಸಿದರು.

    ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಗಿರೀಶ್ ಪಾಟೀಲ, ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ, ಜಿಲ್ಲಾ ಗ್ರಾಹಕ ರಕ್ಷಣಾ ಪರಿಷತ್ ಸದಸ್ಯ ಪೂರ್ಣಿಮಾ ಪಟ್ಟಣಶೆಟ್ಟಿ, ಅಂಗಡಿ ಇನ್‌ಸ್ಟಿಟ್ಯೂಟ್ ಆ್ ಟೆಕ್ನಾಲಜಿ ಎಂ.ಬಿ.ಎ. ವಿಭಾಗದ ನಿರ್ದೇಶಕ ಡಾ. ಸೂರ್ಯಕುಮಾರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯಹಾರಗಳ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ, ಕಾನೂನು ಮಾಪನ ಶಾಸ ಇಲಾಖೆ ಸಹಾಯಕ ನಿಯಂತ್ರಕ ಆರ್.ಐ. ಬಿಸಗುಪ್ಪಿ, ಮಹಿಳಾ ಕಲ್ಯಾಣ ಸಂಸ್ಥೆ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts