More

    ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ನಾಯಕ


    ಯಾದಗಿರಿ: ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿಗೆ ಸದಸ್ಯರನ್ನಾಗಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ, ಹೋರಾಟಗಾರ ಮರೆಪ್ಪ ನಾಯಕ ಮೊಗದಂಪುರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

    ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಸೇರಿ ಒಟ್ಟು 11 ಜನ ತಜ್ಙರ ಸಮಿತಿ ಇದಾಗಿದ್ದು, ಕಲ್ಯಾಣ ಕನರ್ಾಟಕ ಅದರಲ್ಲೂ ಯಾದಗಿರಿ ಜಿಲ್ಲೆಯಿಂದ ಇದೇ ಮೊದಲ ಬಾರಿಗೆ ಮರೆಪ್ಪ ನಾಯಕರನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದು ವಿಶೇಷ.

    ಮರೆಪ್ಪ ನಾಯಕ ಮಧ್ಯಮ ಕುಟುಂಬದಿಂದ ಬಂದಿದ್ದು, ಎರಡುವರೆ ದಶಕಗಳಿಂದ ಪರಿಶಿಷ್ಟ ಪಂಗಡಕ್ಕೆ ಸರ್ಕಾರಮೀಸಲಾತಿ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ನಿರಂತರ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಹಿಂದುಳಿದ ಎಸ್ಟಿ ಜನಾಂಗಕ್ಕೆ ಶಿಕ್ಷಣ, ಉದ್ಯೋಗ ಸಿಗುವ ನಿಟ್ಟಿನಲ್ಲಿ ಸದಾ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಅಲ್ಲದೆ, 2020ನೇ ಸಾಲಿನ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ 2015ರಲ್ಲಿ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೊರಗಡೆ ಮರೆಪ್ಪ ನಾಯಕ್ ಹೋರಾಟಕ್ಕೆ ಧುಮುಕಿದ್ದರು. ಆಗ ಪೊಲೀಸರಿಂದ ಲಾಠಿ ರುಚಿ ಕಂಡಿದ್ದರು. ಇನ್ನೂ 2017 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾದಗಿರಿಗೆ ಆಗಮಿಸಿದ್ದ ವೇಳೆ ಅನ್ಯ ಜಾರಿಯವರಿಗೆ ಎಸ್ಟಿ ಹೆಸರಲ್ಲಿ ಜಾತಿ ಪ್ರಮಾಣಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಪ್ಪುಪಟ್ಟಿ ಪ್ರದರ್ಶನ ಮಾಡಿ ಪೊಲೀಸರ ಬಂಧನಕ್ಕೊಳಗಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts