More

    ವಾಲ್ಮೀಕಿ ಸಂದೇಶಗಳಿಂದ ಉತ್ತಮ ಸಮಾಜ, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅಭಿಮತ, ಜಯಂತಿಗಳು ಒಂದೇ ಸಮುದಾಯಕ್ಕೆ ಸೀಮಿತ ಸಲ್ಲ

    ನೆಲಮಂಗಲ: ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಮಹರ್ಷಿ ವಾಲ್ಮೀಕಿ ಅವರ ಸಂದೇಶಗಳು ಮಹತ್ವದ ಪಾತ್ರವಹಿಸಲಿವೆ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟರು.

    ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲೂಕು ಆಡಳಿತ, ಸಮಾಜಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಜಯಂತಿಯಲ್ಲಿ ಮಾತನಾಡಿದರು.

    ಜಗತ್ತಿನ ಒಳಿತಿಗಾಗಿ ಮಹಾಕಾವ್ಯವನ್ನು ಕೊಡುಗೆಯಾಗಿ ಕೊಟ್ಟ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ರಾಮಾಯಣ, ಮಹಾಭಾರತ ಗ್ರಂಥಗಳು ರಾಷ್ಟ್ರಕ್ಕೆ ಸಾಂಸ್ಕೃತಿಕ ಶ್ರೀಮಂತಿಕೆ ತಂದುಕೊಟ್ಟಿವೆ. ಆದ್ದರಿಂದ ಜಯಂತಿಯನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ವಾಲ್ಮೀಕಿ ಮಹರ್ಷಿಗಳು ರಾಮಾಯಣ ಕಾವ್ಯದಲ್ಲಿ ಸೃಷ್ಟಿಸಿರುವ ಆದರ್ಶಯುತ ಪಾತ್ರಗಳನ್ನು ಎಲ್ಲರೂ ಅನುಸರಣೆ ಮಾಡಬೇಕಿದೆ ಎಂದರು.

    ಸಮುದಾಯದವರು ಸಂಘಟಿತರಾಗುವ ಜತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.

    ವಾಲ್ಮೀಕಿ ಸಂಘದ ಅಧ್ಯಕ್ಷ ಬಿ.ಎನ್.ನರಸಿಂಹಮೂರ್ತಿ ಮಾತನಾಡಿ, ವಾಲ್ಮೀಕಿ ರಚಿಸಿದ ರಾಮಾಯಣ ದೇಶವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯಲು ಹಾಗೂ ಭಾರತೀಯರ ಧರ್ಮ ಸಂಸ್ಕೃತಿ, ಆಚಾರ ವಿಚಾರಗಳ ಅಭಿವ್ಯಕ್ತಿಯಾಗಿದೆ. ರಾಮಾಯಣ ಜಗತ್ತಿನ ಹಲವು ಭಾಷೆಗಳಿಗೆ ಅನುವಾದಗೊಂಡಿರುವುದು ಹೆಮ್ಮೆಯ ಸಂಗತಿ. ಮಹನೀಯರ ಆದರ್ಶಗಳನ್ನು ಪಾಲಿಸಿದಲ್ಲಿ ಮಾತ್ರ ಜಯಂತಿ ಆಚರಣೆ ಸಾರ್ಥಕವಾಗಲಿದೆ ಎಂದರು.

    ಡಿವೈಎಸ್‌ಪಿ ಜಗದೀಶ್, ವೃತ್ತ ನಿರೀಕ್ಷಕ ಎ.ವಿ.ಕುಮಾರ್, ವಾಲ್ಮೀಕಿ ನಾಯಕರ ಹಿತರಕ್ಷಣಾ ಟ್ರಸ್ಟ್ ಉಪಾಧ್ಯಕ್ಷ ಮಾರುತಿ, ನಮ್ಮ ಕರ್ನಾಟಕ ಜನಸೈನ್ಯ ಸಂಸ್ಥಾಪಕ ಅಧ್ಯಕ್ಷ ಬಿ.ನರಸಿಂಹಯ್ಯ, ವಾಲ್ಮೀಕಿ ಸಂಘದ ಕಾರ್ಯದರ್ಶಿ ವೆಂಕಟೇಶ್, ನಿರ್ದೇಶಕರಾದ ಸುಬ್ಬರಾಯಪ್ಪ, ಗಂಗಹನುಮಯ್ಯ, ನರಸಿಂಹರಾಜು, ಮುಖಂಡರಾದ ನಾಗರಾಜು, ಲಕ್ಷ್ಮಣಪ್ಪ, ಕೆಂಪರಾಮಯ್ಯ, ಕುಮಾರ್, ನಾಗೇಂದ್ರ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts