More

    ವಿಕೋಪ ನಿರ್ವಹಣೆಯಲ್ಲಿ ಮಾಧ್ಯಮ ಪಾತ್ರ ಹಿರಿದು

    ಕಲಬುರಗಿ: ವಿಕೋಪ ನಿರ್ವಹಣೆ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರ ಮಹತ್ವವಾಗಿದ್ದು, ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಜನತೆಯ ಮಧ್ಯೆ ಮಾಧ್ಯಮಗಳು ಸೇತುವೆಯಂತೆ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಪತ್ರಕರ್ತ ಶಿವನಂದನ್ ಟಿ. ವಿ. ಅಭಿಪ್ರಾಯಪಟ್ಟರು.
    ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಕಲಬುರಗಿ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಸಹಯೋಗದಲ್ಲಿ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ವಿಕೋಪ ನಿರ್ವಹಣೆಯಲ್ಲಿ ಮಾಧ್ಯಮಗಳ ಪಾತ್ರ ಕುರಿತು ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ವಿಕೋಪ ವರದಿಗಾರಿಕೆಯ ತತ್ವ, ಸವಾಲುಗಳು ಹಾಗೂ ವಿಕೋಪ ಸಂದರ್ಭದಲ್ಲಿ ಮಾಧ್ಯಮ ನೀತಿ ಕುರಿತು ಉಪನ್ಯಾಸ ನೀಡಿದರು.
    ವಿಕೋಪ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮಧ್ಯೆ ಯಾವುದೇ ಕಾರಣಕ್ಕೂ ಅಹಂ ಎದುರಾಗಬಾರದು. ಇದರಿಂದ ಸಮಸ್ಯೆ ಹೆಚ್ಚಾಗಿ ಜನರು ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಮಾಧ್ಯಮಗಳು ಮತ್ತು ಅಧಿಕಾರಿಗಳ ಮಧ್ಯೆ ಉತ್ತಮ ಸಂಬಂಧ ಅಗತ್ಯವಿದೆ. ಆಗ ಮಾತ್ರ ವಿಕೋಪದ ಸಂದರ್ಭಗಳಲ್ಲಿ ಎದುರಾಗುವ ಸಮಸ್ಯೆಗಳ ಸುಲಭವಾಗಿ ನಿವಾರಿಸುವಲ್ಲಿ ಸಹಾಯಕವಾಗುತ್ತದೆ ಎಂದರು.
    ವಿಕೋಪ ನಿರ್ವಹಣೆ ಸಂದರ್ಭದಲ್ಲಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಸೂಕ್ತ ಮಾಹಿತಿ ನೀಡಬೇಕು. ಆಗ ಮಾತ್ರ ಘಟನೆಗಳ ನೈಜ ವರದಿ ಮಾಡಲು ಸಾಧ್ಯ, ಇಲ್ಲದಿದ್ದರೆ ಸುಳ್ಳು ಸುದ್ದಿಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
    ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಭವಾನಿ ಸಿಂಗ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಕೋಪಗಳೆಂದರೆ ಕೇವಲ ನೆರೆಗೆ ಸಂಬಂಧಿಸಿದ್ದಲ್ಲ, ಪ್ರಕೃತಿಯಲ್ಲಿ ಎದುರಾಗುವ ಅನೇಕ ಸಮಸ್ಯೆಗಳನ್ನು ವಿಕೋಪಗಳೆಂದು ಪರಿಗಣಿಸಬೇಕಾಗುತ್ತದೆ. ಸಾಮಾನ್ಯವಾಗಿ ಕಲಬುರಗಿ ಜಿಲ್ಲೆಯಲ್ಲಿ ಅತಿಯಾದ ಬಿಸಿಲಿನ ಪ್ರಭಾವದಿಂದ ಎದುರಾಗುವ ಸಮಸ್ಯೆಯೂ ವಿಕೋಪಗಳಲ್ಲಿ ಒಂದಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಪರ್ತಕರ್ತರು ಜನರ ಸಮಸ್ಯೆ ನಿವಾರಿಸುವಲ್ಲಿ ಕೆಲಸ ಮಾಡಬೇಕು ಎಂದರು.
    ಬೆಂಗಳೂರಿನ ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿದರ್ೇಶಕ ಡಾ. ದಿಲೀಪ್ಕುಮಾರ್ ಎಂ. ವಿಕೋಪ ನಿರ್ವಹಣೆಯ ಮೂಲ ತತ್ವಗಳು ಹಾಗೂ ವಿಕೋಪ ನಿರ್ವಹಣಾ ಕಾಯ್ದೆ ಕುರಿತು ಪಿಪಿಟಿ ಮೂಲಕ ಮಾಹಿತಿ ನೀಡಿದರು.
    ಕಲಬುರಗಿ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಸೇರಿದಂತೆ ಹಿರಿಯ ಪರ್ತಕರ್ತರು, ಹಿರಿಯ ಅಧಿಕಾರಿಗಳು ಇದ್ದರು. ಜಿಲ್ಲಾ ತರಬೇತಿ ಕೇಂದ್ರದ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಅಂಬೋಜಿ ಸ್ವಾಗತಿಸಿದರು. ತಹಸೀಲ್ದಾರ್ ಮತ್ತು ಉಪ ಪ್ರಾಚಾರ್ಯ ನಾಗಮ್ಮ ವಂದಿಸಿದರು.

    ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರ ಸಂಪತ್ತು, ಜೀವಹಾನಿ ತಪ್ಪಿಸುವ ಕುರಿತು ಜನರಿಗೆ ತಿಳಿವಳಿಕೆ ಮೂಡಿಸುವಲ್ಲಿ ಮಾಧ್ಯಮಗಳು ಪ್ರಮುಖವಾದ ಪಾತ್ರ ವಹಿಸಬೇಕು. ಇತ್ತೀಚೆಗೆ ವಿದ್ಯುನ್ಮಾನ (ಎಲೆಕ್ಟ್ರಾನಿಕ್) ಮಾಧ್ಯಮಗಳು, ಸುದ್ದಿ ನೀಡುವ ಭರಾಟೆಯಲ್ಲಿ ಸತ್ಯಾಸತ್ಯತೆ ಪರಿಶೀಲಿಸದೆ ಸುದ್ದಿ ಪ್ರಕಟಿಸುವುದು ತರವಲ್ಲ.
    ಟಿ.ವಿ.ಶಿವಾನಂದನ್,
    ಹಿರಿಯ ಪತ್ರಕರ್ತ, ಕಲಬುರಗಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts