More

    ವಿಜಯಪುರದಲ್ಲಿ ಭಾರಿ ಕಟ್ಟೆಚ್ಚರ

    ವಿಜಯಪುರ: ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದ ಐವರು ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿಯೂ ಸಹ ಭಾರಿ ಭದ್ರತೆ ನಿಯೋಜಿಸಲಾಗಿದೆ.

    ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದವರನ್ನು ಬುಧವಾರ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದಲ್ಲಿ ಭದ್ರತೆಗೆ ನಿಯೋಜಿಸಿದೆ. ಹೊರಗಿನಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಲೈವ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸಲಾಗುತ್ತಿದೆ. ಪ್ರಯಾಣಿಕರ ಬ್ಯಾಗ್‌ಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ.

    ಇನ್ನೊಂದು ತಂಡ ರೈಲು ನಿಲ್ದಾಣದ ಮುಖ್ಯದ್ವಾರದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸುತ್ತಿದೆ. ನಗರದ ಪ್ರಮುಖ ವೃತ್ತದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳ ಹೆಚ್ಚಿನ ಗಮನ ಇರಿಸಲಾಗಿದೆ.

    ಖುದ್ದು ಎಸ್‌ಪಿ ಎಚ್.ಡಿ. ಆನಂದಕುಮಾರ ಹೆಚ್ಚುವರಿ ಎಸ್‌ಪಿ ಶಂಕರ ಮಾರಿಹಾಳ ನೇತೃತ್ವದಲ್ಲಿ ಪ್ರತಿ ಪೊಲೀಸ್ ಠಾಣೆಯಲ್ಲಿ ಭದ್ರತೆ ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ. ಯಾವುದೇ ಅನುಮಾನಾಸ್ಪದ ವ್ಯಕ್ತಿ ಕಂಡು ಬಂದಲ್ಲಿ ಆತನನ್ನು ಸಂಪೂರ್ಣ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನಗರದಲ್ಲಿರುವ ಸಿಸಿ ಕ್ಯಾಮರಾಗಳನ್ನು ಕಂಟ್ರೋಲ್ ರೂಂ ಮೂಲಕ ಪ್ರತಿಕ್ಷಣ ಗಮನಿಸಬೇಕು. ಯಾವುದಾದರೂ ಸಿಸಿ ಕ್ಯಾಮರಾ ಕೆಟ್ಟು ಹೋಗಿದ್ದರೆ ತಕ್ಷಣ ಅವುಗಳನ್ನು ದುರಸ್ತಿ ಮಾಡಿಸಬೇಕು. ಸಂಪೂರ್ಣ ಅಲರ್ಟ್ ಆಗಿರಬೇಕು ಎಂದು ಪೊಲೀಸರಿಗೆ ಎಸ್‌ಪಿ ಆನಂದಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts