More

    ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ, ಪ್ರತಿ ವಾರ್ಡ್‌ನಿಂದ ಆಮ್ ಆದ್ಮಿ ಸ್ಪರ್ಧೆ, ವಕ್ತಾರ ಡಾ.ಬಿ.ಎಂ. ಬಿರಾದಾರ ಹೇಳಿದ್ದೇನು ಗೊತ್ತಾ?

    ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಬೆನ್ನಲ್ಲೇ ಪ್ರತಿ ವಾರ್ಡ್‌ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಮ್ ಆದ್ಮಿ ಪಕ್ಷ ತಯಾರಿ ನಡೆಸಿದೆ ಎಂದು ನಗರ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ವಕ್ತಾರ ಡಾ.ಬಿ.ಎಂ. ಬಿರಾದಾರ ತಿಳಿಸಿದ್ದಾರೆ.

    ಆಮ್ ಆದ್ಮಿ ಪಾರ್ಟಿ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ. ಇದೇ ಮೊದಲ ಬಾರಿ ಮಹಾನಗರ ಪಾಲಿಕೆ ಚುನಾವಣೆ ಎದುರಿಸುತ್ತಿದೆ. ಪ್ರತಿ ದಿನ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ನಗರ ಮಾತ್ರವಲ್ಲದೇ ಗ್ರಾಮೀಣ ಭಾಗಕ್ಕೂ ಪಕ್ಷ ವಿಸ್ತರಿಸುತ್ತಿದೆ ಎಂದು ತಿಳಿಸಿದ್ದಾರೆ.

    ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ. ದೇಶದ ಅಪ್ರತಿಮ ನಾಯಕ ಅರವಿಂದ ಕೇಜ್ರಿವಾಲ್ ಅವರ ವಿಚಾರ, ಸಿದ್ಧಾಂತ, ಜನಪರ ಕಾರ್ಯಕ್ರಮಗಳನ್ನು ನೋಡಿ ಜನ ಸ್ವಯಂ ಪ್ರೇರಿತವಾಗಿ ಆಮ್ ಆದ್ಮಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಆಡಳಿತದಿಂದ ಬೇಸತ್ತ ಜನ ಆಮ್ ಆದ್ಮಿಯತ್ತ ವಾಲುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಮಹಾನಗರ ಪಾಲಿಕೆ ಜೊತೆಗೆ ಎಲ್ಲ ವಿಧಾನ ಸಭೆ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದಾಗಿ ತಿಳಿಸಿದ್ದಾರೆ.

    ವಿಧಾನ ಸಭೆ ಚುನಾವಣೆಗೆ ಮುನ್ನವೇ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಎದುರಾಗಲಿದೆ. ಈಗಾಗಲೇ ಪ್ರತಿ ವಾರ್ಡ್‌ಗಳಿಗೆ ಭೇಟಿ ನೀಡಿ ಜನಾಭಿಪ್ರಾಯ ಸಂಗ್ರಹಿಸಲಾಗಿದೆ. ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಣಕ್ಕಿಳಿಸಲು ತೀರ್ಮಾನಿಸಿದ್ದು, ಈ ಬಾರಿ ಪಾಲಿಕೆಯಲ್ಲಿ ಆಮ್ ಆದ್ಮಿ ನಿರ್ಣಾಯಕ ಪಾತ್ರವಹಿಸಲಿದೆ ಎಂದು ಡಾ.ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts