More

    ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ‌ ಚಾಲನೆ

    ವಿಜಯಪುರ: ಐತಿಹಾಸಿಕ ಜಿಲ್ಲೆಯ ಬಹುದಿನದ ಬೇಡಿಕೆಯಾದ ವಿಮಾನ ನಿಲ್ದಾಣ ಕಾಮಗಾರಿಗೆ ಸೋಮವಾರ ಬಿ.ಎಸ್. ಯಡಿಯೂರಪ್ಪ ಅವರು ವರ್ಚುವಲ್ ಸಭೆ ಮೂಲಕ ಚಾಲನೆ ನೀಡಿದರು.

    ನಗರ ಹೊರವಲುದ ಭುರಾಣಪುರ ಬಳಿಯ ನಿಯೋಜಿತ ಸ್ಥಳದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ವರ್ಚುವಲ್ ಸಭೆ ಮೂಲಕ ಭಾಗವಹಿಸಿದರು.

    ವಿಜಯಪುರ ಐತಿಹಾಸಿಕ, ಧಾರ್ಮಿಕವಾಗಿ ಮಹತ್ವ ಪಡೆದ ಜಿಲ್ಲೆ. ಮಹಾತ್ಮ ಬಸವೇಶ್ವರರ ಜಿಲ್ಲೆ‌ ಮೊದಲ ಮಹಿಳಾ ವಿವಿ, ಸೈನಿಕ ಶಾಲೆ, ವೈದ್ಯಕೀಯ ಕಾಲೇಜ್ ಹೊಂದಿದ ವಿಶೇಷ ಜಿಲ್ಲೆ. ತೋಟಗಾರಿಕೆ ಬೆಳೆಗೆ ಹೆಸರಾದ ಜಿಲ್ಲೆ. ಆರ್ಥಿಕ ಹಾಗೂ ಪ್ರವಾಸೋದ್ಯಮ ಗಮನದಲ್ಲಿರಿಸಿಕೊಂಡು ವಿಮಾ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದರು.

    ಎರಡು ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ 95 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು‌.

    ರಾಜ್ಯ ಸರ್ಕಾರಕ ಈಗಾಗಲೇ ಕಲ್ಯಾಣ ಕರ್ನಾಟಕ ಯೋಜನೆಯಡಿ ಕಲಬುರಗಿ, ಬೀದರನಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಂಡಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದ ಸರ್ವತೋಮುಖ ಬೆಳವಣಿಗೆಯಾಗಲಿದೆ ಎಂದರು.

    ಶಾಸಕ ಡಾ. ದೇವಾನಂದ ಚವಾಣ್ ಅಧ್ಯಕ್ಷತೆ ವಹಿಸಿದ್ದರು.
    ಡಿಸಿಎಂ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಹಾಪುರ, ಸಾವಯವ ಹಾಗೂ ಬೀಜ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಾಜಿ ಶಾಸಕ ರಮೇಶ ಭೂಸನೂರ, ಎಡಿಸಿ ರಮೇಶ ಕಳಸದ, ಜಿಪಂ ಸಿಇಒ ಗೋವಿಂದ ರೆಡ್ಡಿ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts