More

    ವಿಜೃಂಭಣೆಯ ವೈದ್ಯೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

    ಪಿರಿಯಾಪಟ್ಟಣ: ಪಟ್ಟಣದ ಶ್ರೀ ವೈದ್ಯೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಭಾನುವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

    ಮುಂಜಾನೆಯಿಂದಲೇ ದೇವಾಲಯದಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದವು. ಅಧಿವಾಸ ಹೋಮ, ರಥ ಶುದ್ಧಿ, ಕಲಶಾಭಿಷೇಕ, ಮಹಾಮಂಗಳಾರತಿ ಮತ್ತಿತರ ಪೂಜಾ ವಿಧಿವಿಧಾನಗಳ ಬಳಿಕ ಉತ್ಸವ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿಸಲಾಯಿತು. ಬಳಿಕ ಬಗೆಬಗೆಯ ಪುಷ್ಪಾಲಂಕಾರಗಳಿಂದ ಅಲಂಕೃತಗೊಂಡಿದ್ದ ರಥದ ಬಳಿ ಉತ್ಸವ ಮೂರ್ತಿಯನ್ನು ತಂದು ರಥದ ಸುತ್ತ ಪ್ರದಕ್ಷಿಣೆ ಹಾಕಿಸಿ 11.30ರ ಶುಭ ಲಗ್ನದಲ್ಲಿ ರಥದಲ್ಲಿ ಕೂರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಭಕ್ತರು ರಥವನ್ನು ಎಳೆಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.

    ದೇವಾಲಯದ ಮುಂಭಾಗದ ನಂದಿ ಗುಡ್ಡದವರೆಗೆ ರಥವನ್ನು ಎಳೆಯಲಾಯಿತು. ರಥೋತ್ಸವದ ಬಳಿಕ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ಜಾತ್ರಾ ಮಹೋತ್ಸವ ಸಮಿತಿಯ ಸದಸ್ಯರಾದ ಮುರಳಿ, ರೇವತಿ, ರಮೇಶ್ ಅಡಿಗ, ಷಣ್ಮುಖರಾವ್, ತಮ್ಮಣ್ಣಯ್ಯ, ರಾಮು, ಪಿ.ಎಸ್.ಹರೀಶ್, ಶ್ರೀನಿವಾಸ್, ಸುರೇಶ್, ರವಿ, ಲವಕುಮಾರ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts