More

    ವಿಜೃಂಭಣೆಯ ಸೋಮೇಶ್ವರಸ್ವಾಮಿ ರಥೋತ್ಸವ

    ಗುಂಡ್ಲುಪೇಟೆ: ತಾಲೂಕಿನ ಕಂದೇಗಾಲ ಸಮೀಪವಿರುವ ಸ್ಕಂದಗಿರಿ ಪಾರ್ವತಾಂಬ ಬೆಟ್ಟದಲ್ಲಿ ಶುಕ್ರವಾರ ಸೋಮೇಶ್ವರಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

    ಪ್ರತಿ ವರ್ಷವೂ ಬೆಟ್ಟದಲ್ಲಿ ಬುದ್ಧಪೂರ್ಣಿಮೆಯಂದು ಪಾರ್ವತಾಂಬ ಸಮೇತ ಸೋಮೇಶ್ವರ ಸ್ವಾಮಿಯ ರಥೋತ್ಸವ ನಡೆಸಲಾಗುತ್ತಿದೆ. ರಥೋತ್ಸವದ ಅಂಗವಾಗಿ ಕಳೆದ ಮೂರು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗಿತ್ತು. ದೇವಾಲಯ ಹಾಗೂ ರಥವನ್ನು ವಿವಿಧ ವರ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಉದ್ಭವ ಸೋಮೇಶ್ವರಸ್ವಾಮಿ ಹಾಗೂ ಪಾರ್ವತಿ ಅಮ್ಮನವರ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

    ಮಧ್ಯಾಹ್ನ 12 ಗಂಟೆಗೆ ಪಾರ್ವತಾಂಬ ಸೋಮೇಶ್ವರಸ್ವಾಮಿಯ ಉತ್ಸವ ಮೂರ್ತಿಗಳನ್ನು ರಥದ ಮೇಲಿರಿಸಿ ಜಾತ್ರಾ ಮೈದಾನದಲ್ಲಿ ಮೆರವಣಿಗೆ ಮಾಡಲಾಯಿತು. ಸಾವಿರಾರು ಭಕ್ತರು ಜೈಕಾರದೊಂದಿಗೆ ರಥದ ಹಗ್ಗವನ್ನು ಎಳೆದು ಪುನೀತರಾದರು. ನವ ದಂಪತಿಗಳು ರಥಕ್ಕೆ ಹಣ್ಣು ದವನ ಎಸೆದು ಕೃತಾರ್ಥರಾದರು. ಅಕ್ಕಪಕ್ಕದ ಗ್ರಾಮಗಳಲ್ಲದೆ ನೆರೆಯ ತಾಲೂಕುಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ದೇವಸ್ಥಾನದ ಸಮಿತಿ ವತಿಯಿಂದ ಸುಮಾರು ಹತ್ತು ಸಾವಿರ ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts