More

    6.42 ಲಕ್ಷ ರೂ. ದಂಡ ವಿಧಿಸಿ ಆದೇಶ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ನಿವೃತ್ತ ಪಿಂಚಣಿದಾರರಿಗೆ ಪಿಂಚಣಿ ನಿಗದಿಪಡಿಸುವಾಗ ಪಿಎಫ್ ಇಲಾಖೆ ಸರಿಯಾಗಿ ಲೆಕ್ಕ ಹಾಕದೆ ತಪ್ಪು ಎಸಗಿರುವ ಕಾರಣಕ್ಕೆ 6.42 ಲಕ್ಷ ರೂ. ದಂಡ ಮತ್ತು ಪರಿಹಾರ ವಿಧಿಸಿ ಜಿಲ್ಲಾ ಗ್ರಾಹಕರ ಆಯೋಗ ಬುಧವಾರ ಆದೇಶ ಹೊರಡಿಸಿದೆ.
    ಹುಬ್ಬಳ್ಳಿಯ ಪ್ರಾವಿಡೆಂಟ್ ಫಂಡ್ ಇಲಾಖೆಯು ನಿವೃತ್ತಿ ನಂತರದ ಪಿಂಚಣಿ ನಿಗದಿಪಡಿಸುವಾಗ ತಪ್ಪು ಲೆಕ್ಕ ಮಾಡಿದೆ ಎಂದು 6 ಜನ ನಿವೃತ್ತರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
    ದೂರಿನ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪಿ.ಸಿ ಹಿರೇಮಠ, ಪಿಂಚಣಿ ನಿಗದಿಪಡಿಸುವಾಗ ಪಿಎಫ್ ಇಲಾಖೆ ಸರಿಯಾಗಿ ಲೆಕ್ಕ ಹಾಕದೆ ತಪ್ಪು ಎಸಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಅಭಿಪ್ರಾಯಪಟ್ಟು, ಪಿಂಚಣಿ ನಿಗದಿಪಡಿಸಿದ ದಿನಾಂಕದಿಂದ ಆಯೋಗ ಆದೇಶ ಹೊರಡಿಸಿದ ದಿನದವರೆಗೆ 6 ಜನರಿಗೆ ಒಟ್ಟು 6.42 ಲಕ್ಷ ರೂ. ಬಾಕಿ ಹಣ ಮತ್ತು ಅದರ ಮೇಲೆ ಶೇ.10ರಂತೆ ಬಡ್ಡಿ ಲೆಕ್ಕ ಹಾಕಿ ನೀಡುವಂತೆ ಆದೇಶಿಸಿದೆ. ಜತೆಗೆ ಪ್ರತಿ ದೂರುದಾರರಿಗೆ ಮಾನಸಿಕ ತೊಂದರೆಗಾಗಿ ತಲಾ 20 ಸಾವಿರ ರೂ.ಪರಿಹಾರ ಹಾಗೂ ತಲಾ 10 ಸಾವಿರ ರೂ. ಪ್ರಕರಣದ ಖರ್ಚು ವೆಚ್ಚವನ್ನು ತೀರ್ಪು ನೀಡಿದ ಒಂದು ತಿಂಗಳೊಳಗೆ ನೀಡುವಂತೆ ಆದೇಶಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts