More

    ವಿಜ್ಞಾನ ವಸ್ತುಪ್ರದರ್ಶನ, ಪ್ರಾತ್ಯಕ್ಷಿಕೆ

    ಮೈಸೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮೈಸೂರು ವಿಶ್ವವಿದ್ಯಾಲಯದ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ಅಧ್ಯಯನ ವಿಭಾಗದಲ್ಲಿ ಶನಿವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಗಮನ ಸೆಳೆಯಿತು.


    ಅಸ್ತಿಪಂಜರ, ಮನುಷ್ಯನ ದೇಹದ ವಿವಿಧ ಭಾಗದ ಅಂಗಾಂಗಗಳ ಮಾದರಿ… ಹೀಗೆ ವಿವಿಧ ವಿಜ್ಞಾನ, ದೇಹದ ಮಾದರಿಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ಅವುಗಳ ಕುರಿತು ವಿವರಣೆ ನೀಡಿದರು.


    ಚಾಮರಾಜನಗರದ ಗ್ಯಾವಿಟಿ ಸೈನ್ಸ್ ಫೌಂಡೇಷನ್ ಸಹಯೋಗದಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಮುಜಾಫರ್ ಎಚ್.ಅಸ್ಸಾದಿ ಉದ್ಘಾಟಿಸಿದರು.

    ವಿಜ್ಞಾನ ನಿಕಾಯದ ಡೀನ್ ಪ್ರೊ.ಎಚ್.ಟಿ. ಬಸವರಾಜಪ್ಪ, ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ, ಅಂಗರಚನಾಶಾಸ್ತ್ರದ ಹಿರಿಯ ಪ್ರಾಧ್ಯಾಪಕ ಡಾ.ಎನ್.ಎಂ. ಶ್ಯಾಮಸುಂದರ್, ಫೌಂಡೇಷನ್‌ನ ಸಂಸ್ಥಾಪಕ, ಕಾರ್ಯದರ್ಶಿ ಎ.ಎಸ್.ಅಭಿಷೇಕ್, ವಿಭಾಗದ ಮುಖ್ಯಸ್ಥೆ ಪ್ರೊ.ಎಸ್.ಎಸ್.ಮಾಲಿನಿ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts