More

    ವಿದ್ಯಾನಿಧಿ ವಿಸ್ತರಣೆಗೆ ಸಿಎಂ ಜತೆ ಚರ್ಚಿಸಿ ಕ್ರಮ

    ಬೆಳಗಾವಿ: ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೊಡಮಾಡುವ ವಿವಿಧ ಸೌಲಭ್ಯಗಳ ‘ವಿದ್ಯಾನಿಧಿ’ ಯೋಜನೆಯನ್ನು ನೇಕಾರರ ಮಕ್ಕಳಿಗೂ ವಿಸ್ತರಿಸುವುದು ಹಾಗೂ ಕೂಲಿ ಮಾಡುವ ನೇಕಾರರನ್ನು ಕಾರ್ಮಿಕರೆಂದು ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಭರವಸೆ ನೀಡಿದರು.

    ಇಲ್ಲಿನ ಸುವರ್ಣ ಗಾರ್ಡನಲ್ಲಿ ರಾಜ್ಯ ವೃತ್ತಿ ನೇಕಾರರ ಜಾಗೃತಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ನೇಕಾರರಿಗೆ ಸರ್ಕಾರದಿಂದ ನ್ಯಾಯಯುತವಾಗಿ ಸಿಗಬೇಕಾದ ಎಲ್ಲ ಸೌಲಭ್ಯ ಒದಗಿಸಲಅಗುವುದು ಎಂದರು.

    ಮಾಜಿ ಸಚಿವೆ ಉಮಾಶ್ರೀ ಮಾತನಾಡಿ, ನೇಕಾರರನ್ನು ಸರ್ಕಾರ ಕಡೆಗಣಿಸದೇ, ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೂ ಮುನ್ನ, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ನೇಕಾರ ಸೇವಾ ಸಂಘದ ನೇತೃತ್ವದಲ್ಲಿ ನೂರಾರು ನೇಕಾರರು ಬೆಳಗಾವಿಯ ಹಳೇ ನಾಕಾದಿಂದ ಸುವರ್ಣ ವಿಧಾನಸೌಧದವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿ, ಜವಳಿ ಸಚಿವ ಶಂಕರಗೌಡ ಮುನ್ನೇನಕೊಪ್ಪ ಅವರಿಗೆ ಮನವಿ ಸಲ್ಲಿಸಿದರು.

    ಸಾಲ ಮನ್ನಾ ಮಾಡಿ: ಕರೊನಾದಿಂದ ಸಂಕಷ್ಟಕ್ಕೆ ಸಿಲುಕಿದ ನೇಕಾರರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಸಂಘಗಳು, ಮೈಕ್ರೋ ಫೈನಾನ್ಸ್ ಸೇರಿದಂತೆ ಇತರ ಕಡೆಗಳಲ್ಲಿ ನೇಕಾರರು ಮಾಡಿದ ಸಾಲಮನ್ನಾ ಮಾಡಬೇಕು. 5 ರಿಂದ 6 ಲಕ್ಷ ನೇಕಾರ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರಂತೆ ಸೌಲಭ್ಯ ಒದಗಿಸಬೇಕು.

    ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಗಳಿಗೆ ಸರ್ಕಾ 10 ಲಕ್ಷ ರೂ. ಪರಿಹಾರ ನೀಡಬೇಕು. 2016ರಿಂದ ಸರ್ಕಾರ ಡಿಸಿಸಿ ಬ್ಯಾಂಕ್‌ಗೆ ನೀಡಬೇಕಾದ ಬಡ್ಡಿ ಸಹಾಯಧನ 1.82 ಕೋಟಿ ರೂ. ಹಣ ಬಿಡುಗಡೆಗೊಳಿಸಬೇಕು. ನೇಕಾರರಿಗೆ ರೈತರಂತೆ ಉಚಿತ ವಿದ್ಯುತ್ ಒದಗಿಸಬೇಕು. ಜವಳಿ ಇಲಾಖೆ ನೀಡುವ ವಸತಿ ಯೋಜನೆ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಬೇಕು. ನೇಕಾರರ ಮಕ್ಕಳಿಗೆ ಸ್ಕಾಲರ್‌ಶಿಪ್ ಸೇರಿದಂತೆ ಇತರ ಸೌಲಭ್ಯ ಒದಗಿಸಬೇಕು ಎಂದು ಮನವಿ ನೀಡಿ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರವೀಂದ್ರ ಕಲಬುರ್ಗಿ, ಪರಶುರಾಮ ಢಗೆ, ಪಾಂಡುರಂಗ ಧೋತ್ರೆ, ರಮೇಶ ಸೊಂಟಕ್ಕಿ ಇತರರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts