More

    ವಿದ್ಯಾಭ್ಯಾಸದ ಜತೆ ಸಂಸ್ಕಾರ, ಗುಣವಂತಿಕೆ ಬೆಳೆಸಿಕೊಳ್ಳಿ

    ಶನಿವಾರಸಂತೆ: ವಿದ್ಯಾಭ್ಯಾಸದ ದಿನಗಳಲ್ಲಿ ವಿದ್ಯಾರ್ಥಿಗಳು ಪಠ್ಯ, ಕ್ರಿಡೆ, ಸಾಂಸ್ಕೃತಿಕ ಚಟುವಟಿಕೆ ಜೊತೆಯಲ್ಲಿ ಸಂಸ್ಕಾರ, ಗುಣವಂತಿಕೆಯನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಗುರಿ ಸಾಧಿಸಲು ಸಾಧ್ಯ ಎಂದು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸರ್ದಾರ್ ಅಹಮ್ಮದ್ ಅಭಿಪ್ರಾಯಪಟ್ಟರು.

    ಇಲ್ಲಿನ ಭಾರತಿ ಪ.ಪೂ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು 2023-24ನೇ ಶೈಕ್ಷಣಿಕ ಸಾಲಿನ ಕಿರಿಯ ವರ್ಷದ ವಿದ್ಯಾರ್ಥಿಗಳಿಗಾಗಿ ಬುಧವಾರ ಹಮ್ಮಿಕೊಂಡಿದ್ದ ಸ್ವಾಗತ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾಬ್ಯಾಸದ ದಿನಗಳಲ್ಲಿ ಒಳ್ಳೆಯ, ಕೆಟ್ಟ ವಾತಾವರಣಗಳಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಒಳ್ಳೆಯ ಮಾರ್ಗವನ್ನು ಅನುಸರಿಸಿದೆ ಭವಿಷ್ಯದಲ್ಲೂ ಸನ್ಮಾರ್ಗದ ಹಾದಿ ಹಿಡಿಯಲು ಸಹಾಯವಾಗುತ್ತದೆ. ಆದರೆ ಕೆಟ್ಟದ್ದನ್ನು ಸ್ವೀಕರಿಸಿದರೆ ಭವಿಷ್ಯದಲ್ಲಿ ಅವನ ಜೀವನವು ಕೆಟ್ಟದಾಗುತ್ತದೆ. ಭವಿಷ್ಯವನ್ನು ರೂಪಿಸಿಕೊಳ್ಳುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿರುವುದರಿಂದ ಉತ್ತಮ ಆಯ್ಕೆಯನ್ನು ವಿರ್ದ್ಯಾಗಳೇ ಮಾಡಬೇಕಾಗುತ್ತದೆ ಎಂದರು.

    ವಿದ್ಯಾರ್ಜನೆ ಎಂಬುದು ಕೃಷಿ ಇದ್ದಂತೆ. ಉತ್ತಮವಾಗಿ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಉತ್ತಮ ಪ್ರತಿಫಲ ಸಿಗುತ್ತದೆ. ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣದ ವೀಕ್ಷಣೆಯಲ್ಲಿ ಹೆಚ್ಚಾಗಿ ಕಾಲಹರಣ ಮಾಡುತ್ತಿದ್ದು ಈ ವಿದ್ಯಾಭ್ಯಾಸದ ದಿನಗಳಲ್ಲಿ ಇವುಗಳಿಂದ ದೂರ ಇರುವಂತೆ ಕಿವಿಮಾತು ಹೇಳಿದರು.

    ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಾಂತ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಆಕರ್ಷಣೆಗೆ ಒಳಗಾಗುವುದು ಸಹಜ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಮೌಲ್ಯ, ಸಂಸ್ಕಾರಗಳಂತಹ ವಾತಾವರಣದತ್ತ ಆಕರ್ಷಣೆಯಾಗಬೇಕು. ಕಿರಿಯ ವಿದ್ಯಾರ್ಥಿಗಳು ವಿನಯವಂತಹ ಹಿರಿಯ ವಿದ್ಯಾರ್ಥಿಗಳನ್ನು ಆದರ್ಶರನ್ನಾಗಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಅಧ್ಯಕ್ಷ ಜಗನ್‌ಪಾಲ್, ನಿರ್ದೇಶಕ ಆನಂದ್, ಪ್ರೌಢಶಾಲಾ ಮುಖ್ಯಶಿಕ್ಷಕ ನರಸಿಂಹಮೂರ್ತಿ ಮಾತನಾಡಿದರು. ವಿದ್ಯಾಸಂಸ್ಥೆ ನಿರ್ದೇಶಕ ಉತ್ತಪ್ಪ, ಪ.ಪೂ. ಕಾಲೇಜು ಪ್ರಾಂಶುಪಾಲ ಅಶೋಕ್, ಉಪನ್ಯಾಸಕ ಸೋಮಶೇಖರ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಇ.ಎಂ.ದಯಾನಂದ್ ಮುಂತಾದವರು ಇದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts