More

    ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ

    ಶನಿವಾರಸಂತೆ; ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಹುರಿದುಂಬಿಸುವ ಗುರುತರ ಜವಾಬ್ದಾರಿ ಶಿಕ್ಷಕರು ಮತ್ತು ಪಾಲಕರ ಮೇಲಿದೆ ಎಂದು ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಕೆ.ಪಿ.ಜಯಕುಮಾರ್ ಅಭಿಪ್ರಾಯಪಟ್ಟರು.

    ಪಟ್ಟಣದ ತ್ಯಾಗರಾಜ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಲಾದ ಶನಿವಾರಸಂತೆ ಕ್ಲಸ್ಟರ್ ಮಟ್ಟದ 2022-23ನೇ ಸಾಲಿನ ಕಲಿಕಾ ಹಬ್ಬ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

    ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜತೆಯಲ್ಲಿ ಕೌಶಲ್ಯ, ಸೃಜನಶೀಲ ಮತ್ತು ಬುದ್ಧಿವಂತಿಕೆ ಎಲ್ಲವನ್ನು ಒಟ್ಟುಗೂಡಿಸಿ ಅವುಗಳನ್ನು ಅನಾವರಣಗೊಳಿಸಲು ಕಲಿಕಾ ಹಬ್ಬ ಉತ್ತಮ ವೇದಿಕೆಯಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರಿಯಾಶೀಲ ಪ್ರತಿಭೆ ಪ್ರದರ್ಶಿಸುವಂತೆ ಸಲಹೆ ನೀಡಿದರು.

    ನಿಡ್ತ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ರೂಪಾ ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ತರಗತಿಯಲ್ಲಿ ಕಂಠಪಾಠ ಶಿಕ್ಷಣಕಷ್ಟೆ ಮೀಸಲಾಗಬಾರದೆಂಬ ಉದ್ದೇಶದಿಂದ ಸರ್ಕಾರ ವಿದ್ಯಾರ್ಥಿಗಳು ಸಂತಸದಿಂದ ಶೈಕ್ಷಣಿಕ ಸಾಲಿನಲ್ಲಿ ವರ್ಷಕೊಮ್ಮೆ ಸೃಜನಶೀಲ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕಲಿಕಾ ಹಬ್ಬ ಹಮ್ಮಿಕೊಂಡಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಮಟ್ಟ ಸುಧಾರಿಸುತ್ತದೆ ಎಂದರು

    ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಮಾತನಾಡಿದರು. ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ ಕಿರಣ್, ದಾನಿ ಮತ್ತು ಹಿರಿಯ ಮುಖಂಡ ಈಶ್ವರಪ್ಪ. ಎಸ್‌ಡಿಎಂಸಿ ಉಪಾಧ್ಯಕ್ಷೆ ಶಾಹಿದ್ ತಾಜ್, ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಚಿಕ್ಕ ಕೊಳತ್ತೂರು ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಉರ್ದು ಶಾಲಾ ಮುಖ್ಯ ಶಿಕ್ಷಕಿ ಸೇವಂತಿ, ದುಂಡಳ್ಳಿ ಗ್ರಂಥಪಾಲಕಿ ಎಸ್.ಪಿ.ದಿವ್ಯ, ಶನಿವಾರಸಂತೆ ಗ್ರಾ.ಪಂ.ಸದಸ್ಯೆ ಸರಸ್ವತಿ, ಶಿಕ್ಷಕಿ ತಂಗಮ್ಮ, ಎಸ್‌ಡಿಎಂಸಿ ಸದಸ್ಯರಾದ ಶಿವಕುಮಾರ್, ಮಧು ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts