More

    ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ಬಿತ್ತುತ್ತಿದೆ ಎಬಿವಿಪಿ

    ಬೀದರ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿಶ್ವದಲ್ಲೇ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವುದರ ಜತೆಗೆ ರಾಷ್ಟ್ರಭಕ್ತಿ ತುಂಬುವ ಕೆಲಸ ಮಾಡುತ್ತಿರುವುದು ಮಾದರಿಯಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ಹೇಳಿದರು.
    ಪರಿಷತ್ ಸಂಸ್ಥಾಪನಾ ದಿನ ನಿಮಿತ್ತ ಎಬಿವಿಪಿ ಕಚೇರಿಯಲ್ಲಿ ಶುಕ್ರವಾರ ಧ್ವಜರೋಹಣ ನೆರವೇರಿಸಿ ಮಾತನಾಡಿ, ಸಮಾಜದಲ್ಲಿ ಅಹಿತಕರ ಘಟನೆ ನಡೆದಲ್ಲಿ ಪ್ರಬಲವಾಗಿ ವಿರೋಧಿಸುವುದರ ಜತೆಗೆ ಅನೇಕ ರೀತಿಯ ರಚನಾತ್ಮಕ ಚಟುವಟಿಕೆಯಲ್ಲಿ ಸಂಘಟನೆ ತೊಡಗಿರುವುದು ಶ್ಲಾಘನೀಯ ಎಂದರು.
    ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಜತೆಗೆ ಹಲವಾರು ಸಮಾಜಮುಖಿ ಚಟುವಟಿಕೆಗಳನ್ನು ಪರಿಷತ್ ನಿರಂತರ ನಡೆಸುತ್ತಿದೆ. ಕರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದೆ. ಕರೊನಾ ವಾರಿಯರ್ಸ್ಗಳಿಗೆ ಸನ್ಮಾನ, ಮಾಸ್ಕ್, ಸ್ಯಾನಿಟೈಸರ್ ವಿತರಣೆ ಹಾಗೂ ಕಷ್ಟದಲ್ಲಿ ಸಿಲುಕಿದ ವಲಸೆ ವಿದ್ಯಾರ್ಥಿಗಳಿಗೆ ಧಾನ್ಯ ವಿತರಣೆ, ರಕ್ತದಾನ ಶಿಬಿರ ಸೇರಿ ನಾನಾ ರೀತಿಯ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದೆ ಎಂದು ಹೇಳಿದರು.
    ನಗರ ಉಪಾಧ್ಯಕ್ಷ ಅನೀಲ ಚೌಧರಿ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಪ್ರಮುಖ ಯೋಗೇಶ ಎಂ.ಬಿ., ವಿ.ಕೆ. ಇಂಟರ್ ನ್ಯಾಷನಲ್ ಕಾಲೇಜಿನ ಪ್ರಾಚಾರ್ಯ ನಾಗೇಶ ಬಿರಾದಾರ, ಪ್ರಮುಖರಾದ ಅರವಿಂದ ಸುಂದಳಕರ್, ಅಮರ ಸುಲ್ತಾನಪುರೆ, ವಿಕಾಸ ಚೋರಮಲ್ಲೆ, ಜಗಮೋಹನರಡ್ಡಿ, ಆನಂದ ಡೋಬಾಳೆ, ಬಾಲಾಜಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts