More

    ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಅಪ್‌ಡೇಟ್ ಅಗತ್ಯ  ಡಾ.ಕೆ.ಶಿವಶಂಕರ್ ಹೇಳಿಕೆ 

    ದಾವಣಗೆರೆ : ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ತಕ್ಕಂತೆ ಅಪ್‌ಡೇಟ್ ಆಗಬೇಕು. ಆಗ ಜ್ಞಾನ ವೃದ್ಧಿಯಾಗಲಿದೆ ಎಂದು ದಾವಣಗೆರೆ ವಿವಿ ಪರೀಕ್ಷಾಂಗ ಕುಲ ಸಚಿವ ಡಾ.ಕೆ.ಶಿವಶಂಕರ್ ಹೇಳಿದರು.
    ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಸ್ನಾತಕೋತ್ತರ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಆರ್‌ಜಿ ವೈಭವ 2022 ಕಾರ್ಯಕ್ರಮದಲ್ಲಿ ಮಾತನಾಡಿದರು.
    ಯುವಶಕ್ತಿಯೇ ದೇಶದ ಬಹುದೊಡ್ಡ ಆಸ್ತಿ. ಯುವಕರು ಪ್ರಾಮಾಣಿಕ ಕೆಲಸ ಮಾಡಿದರೆ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡಯ್ಯಬಹುದು. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಶೈಕ್ಷಣಿಕ ಪೂರಕ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
    ಇಂದು ಜಾತಿ-ಧರ್ಮ ಭೇದವಿಲ್ಲದೇ ನಟ ಪುನೀತ್ ರಾಜಕುಮಾರ್ ಅವರ ಫೋಟೊ, ಭಿತ್ತಿಪತ್ರಗಳು ಹರಿದಾಡುತ್ತಿದ್ದರೆ ಅವರು ಮಾಡಿದ ಸಮಾಜಮುಖಿ ಕೆಲಸಗಳೇ ಕಾರಣ. ಅವರಂತೆ ವಿದ್ಯಾರ್ಥಿಗಳು ಕೂಡ ಜೀವನದಲ್ಲಿ ವಿದ್ಯೆ, ವಿನಯ, ಕೌಶಲಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
    ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಎಸ್. ಬಸವರಾಜಪ್ಪ , ಇತಿಹಾಸ ವಿಭಾಗದ ಡಾ.ಜೆ.ಕೆ.ಮಲ್ಲಿಕಾರ್ಜುನಪ್ಪ , ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಜೆ.ಅನಿತಾ ಕುಮಾರಿ, ಡಾ.ಚಮನ್‌ಸಾಬ್, ಬೊಮ್ಮಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts