More

    ವಿದ್ಯಾರ್ಥಿಗಳಿಗಾಗಿ ಹಲವು ಸವಲತ್ತು ವಿತರಣೆ

    ಮದ್ದೂರು: ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಶಾಲೆಗಳಿಗೆ ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಲವು ರೀತಿಯ ಸಹಾಯ ಮಾಡಲಾಗುತ್ತಿದೆ ಎಂದು ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂದೀಶಗೌಡ ತಿಳಿಸಿದರು.

    ತಾಲೂಕಿನ ವಳೆಗೆರೆದೊಡ್ಡಿ ಗ್ರಾಮದ ಸರ್ಕಾರಿ ಪ್ರಾಢಶಾಲೆಗೆ ಸೋಮವಾರ ಬ್ಯಾಂಡ್ ಸೆಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಪಂ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಬಹುತೇಕ ಬಡ ಹಾಗೂ ರೈತಾಪಿ ಕುಟುಂಬದ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರಿಗೆ ಖಾಸಗಿ ಶಾಲೆಗಳಲ್ಲಿ ಸಿಗುವ ಸವಲತ್ತುಗಳು ಸಿಗುವುದಿಲ್ಲ. ಹೀಗಾಗಿ ಟ್ರಸ್ಟ್ ವತಿಯಿಂದ ಕೈಲಾದ ಸಹಾಯ ಮಾಡುತ್ತಿದ್ದೇನೆ ಎಂದರು.
    ಪಿಡಿಒ ಲೀಲಾವತಿ ಮಾತನಾಡಿ, ಗ್ರಾಪಂ ಅಧ್ಯಕ್ಷ ನಂದೀಶ್‌ಗೌಡ ಅವರು ಈಗಾಗಲೇ ನಮ್ಮ ಗ್ರಾಪಂ ವ್ಯಾಪ್ತಿಯ ಶಾಲೆಗಳಿಗೆ ಮೊಟ್ಟೆ ವಿತರಣೆ ಮಾಡುತ್ತಿದ್ದಾರೆ. ಪಠ್ಯ ಪರಿಕರಗಳನ್ನು ಸಹ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡುತ್ತಿದ್ದಾರೆ ಎಂದು ಹೇಳಿದರು.ಶಿಕ್ಷಕರಾದ ವೆಂಕಟರಮಣ, ಚೇತನ್, ಅನ್ನಪೂರ್ಣೇಶ್ವರಿ, ರಶ್ಮಿ, ವಸಂತಕುಮಾರ್, ಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts