More

    ವಿದ್ಯಾರ್ಥಿಗಳಿಗೆ ಸೈಬರ್ ಜ್ಞಾನ ಅಗತ್ಯ

    ಬೆಳಗಾವಿ: ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸೈಬರ್ ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮತ್ತು ಜ್ಞಾನದ ಅವಶ್ಯಕತೆಯಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮೈಸೂರಿನ ರಾಜವಶಂಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

    ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸೈಬರ್ ಸೆಕ್ಯೂರಿಟಿ ಹಾಗೂ ಸೈಬರ್ ಅಪರಾಧ ಬಗ್ಗೆ ಜಾಗೃತಿ ಹಾಗೂ ಕೋರ್ಸ್‌ಗಳ ಅಧ್ಯಯನ ಸಂಬಂಧ ಸೈಬರ್‌ವರ್ಸ್ ಫೌಂಡೇಷನ್‌ನೊಂದಿಗೆ ವಿಟಿಯು ಒಡಂಬಡಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಜಾಗತೀಕರಣ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯ ಕಲಿಕೆ ಜತೆಗೆ ಸೈಬರ್ ಕಾನೂನಿನ ಬಗ್ಗೆ ಅಧ್ಯಯನ ನಡೆಸಬೇಕು. ಆ ನಿಟ್ಟಿನಲ್ಲಿ ಕಲಿಕಾ ವಾತಾವರಣ ನಿರ್ಮಾಣ ಆಗಬೇಕು ಎಂದರು. ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಮೈಸೂರಿನ ಮಹಾರಾಜರದ್ದು ಅವಿನಾಭಾವ ಸಂಬಂಧವಿತ್ತು. ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆಗಳು ಸಾಕಷ್ಟಿವೆ ಎಂದರು.

    ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ ಮಾತನಾಡಿ, ನಾಡಿಗೆ ಮೈಸೂರು ಮಹಾರಾಜರು ನೀಡಿದ ಕೊಡುಗೆ ಅಪಾರ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯೂ ಅನನ್ಯ. ಎಲ್ಲರಿಗೂ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಮೈಸೂರು ಮಹಾರಾಜರು ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆ ಮಾಡಿದರು. ಸಮಾಜದ ಏಳಿಗೆಗೆ ದುಡಿದ ರಾಜಮನೆತನ ಎಂದರೆ ಮೈಸೂರು ಒಡೆಯರ್ ಸಂಸ್ಥಾನ ಎಂದರು.

    ಔದ್ಯೋಗಿಕ ಬೇಡಿಕೆಗೆ ತಕ್ಕಂತೆ ಪಠ್ಯಕ್ರಮ ರಚಿಸಲಾಗಿದೆ. ಡಿಜಿಟಲ್ ಯುಗದಲ್ಲಿ ವಿತಾವಿಯು ಆನ್‌ಲೈನ್ ಶಿಕ್ಷಣವನ್ನೂ ಪ್ರಾರಂಭಿಸುತ್ತಿದೆ ಎಂದು ಕುಲಪತಿ ತಿಳಿಸಿದರು. ವಿತಾವಿಯ ಕುಲಸಚಿವ ಪ್ರೊ.ಬಿ.ಈ.ರಂಗಸ್ವಾಮಿ, ಸೈಬರ್‌ವರ್ಸ್ ಫೌಂಡೇಷನ್ ಸಂಸ್ಥಾಪಕ ಕಾಂತರಾಜ್ ಅರಸ್, ಪ್ರೊ.ಟಿ.ಎನ್.ಶ್ರೀನಿವಾಸ, ಹಣಕಾಸು ಅಧಿಕಾರಿ ಎಂ.ಎ.ಸಪ್ನಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts