ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಡಿಸಿಕೊಳ್ಳಬೇಕು:ಶಂಭುನಾಥ ಸ್ವಾಮೀಜಿ

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಡಿಸಿಕೊಳ್ಳಬೇಕು:ಶಂಭುನಾಥ ಸ್ವಾಮೀಜಿ
Published on

ಹಾಸನ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಡಿಸಿಕೊಳ್ಳಬೇಕು ಹಾಗೂ ಸಂಘಟನೆ ಮಾಡುವವರು ಆಧ್ಯಾತ್ಮಿಕವಾಗಿ ಭಾರತೀಯ ತತ್ವದಿಂದ ವಿನಯ ಪೂರ್ವಕವಾಗಿ ಪ್ರಜ್ಞೆ ಉಳ್ಳವರಾಗಬೇಕು ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಕಿವಿ ಮಾತು ಹೇಳಿದರು.
ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಗುರುವಾರ ಕರ್ನಾಟಕ ದಕ್ಷಿಣ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಸಮಾರಂಭ ಮಾತನಾಡಿದ ಅವರು,ಎಬಿವಿಪಿ ಸಂಘಟನೆಯಿಂದ ಯುವಕರಲ್ಲಿ ದೇಶ ಪ್ರೇಮ, ಒಗ್ಗಟ್ಟು, ಶಿಸ್ತುನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ದಾರಿದೀಪವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿ ಪರಿಷತ್‌ನ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಜಿ.ಬಾಲಕೃಷ್ಣ ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಗತ್ತಿನ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದು,್ದ ರಾಷ್ಟ್ರ ಪುನರ್ ನಿರ್ಮಾಣದ ಕಾರ್ಯದಲ್ಲಿ ಯುವ ಸಮುದಾಯವನ್ನು ತೊಡಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ವಿದ್ಯಾರ್ಥಿ ಪರಿಷತ್ ನವಯೋಚನೆಯೊಂದಿಗೆ ಹೆಜ್ಜೆ ಹಾಕುತ್ತಿರುವ ಭಾರತದ ಏಕೈಕ ವಿದ್ಯಾರ್ಥಿ ಸಂಘಟನೆ ಎಂದು ಹೇಳಿದರು.
ಭಾರತದ ಸಾಮಾಜಿಕ ವ್ಯವಸ್ಥೆಗಳನ್ನು ಭಾರತೀಯ ದೃಷ್ಟಿಕೋನದಿಂದ ನೋಡಿದಾಗ ಮಾತ್ರ ಭಾರತೀಯತ್ವವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ. ವಿದ್ಯಾರ್ಥಿ ಪರಿಷತ್ ತನ್ನ ಅನನ್ಯ ಸಂಘಟನಾತ್ಮಕ ಕಾರ್ಯಗಳ ಮುಖಾಂತರ ವಿದ್ಯಾರ್ಥಿ ನಾಯಕರನ್ನು ತಯಾರು ಮಾಡುವ ಕಾರ್ಖಾನೆಯಾಗಿ ವಿದ್ಯಾರ್ಥಿಗಳನ್ನು ಸಮಾಜದ ಆಸ್ತಿಯನ್ನಾಗಿ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ಸಾಬೀತಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂತ ಅಧ್ಯಕ್ಷ ಎಚ್.ಕೆ. ಸತೀಶ್, ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವೇಶ ಕೋರಿ, ಪ್ರಾಂತ ಕಾರ್ಯದರ್ಶಿ ಎಚ್.ಕೆ.ಪ್ರವೀಣ್ ಸೇರಿದಂತೆ ಇತರರು ಇದ್ದರು.ಹಾಸನ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net