More

    ವಿದ್ಯಾರ್ಥಿಗಳು ದೇಶಪ್ರೇಮ ಬೆಳಸಿಕೊಳ್ಳಲಿ

    ಅಳವಂಡಿ: ಅಹಿಂಸಾ ತತ್ವ, ಸತ್ಯ, ಶಾಂತಿ, ನ್ಯಾಯವನ್ನು ಜಗತ್ತಿಗೆ ಸಾರಿದ ಮಹಾನ್ ನಾಯಕ ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಡಾ.ಗವಿಸಿದ್ದಪ್ಪ ಮುತ್ತಾಳ ಹೇಳಿದರು.
    ಗ್ರಾಮದ ಶಿವಮೂರ್ತಿಸ್ವಾಮಿ ಇನಾಮದಾರ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ಹಾಗೂ ರಾಷ್ಟ್ರೀಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಇದನ್ನೂ ಓದಿ: ಒಂದೇ ಗಂಟೆಯಲ್ಲಿ 100% ಸಬ್​ಸ್ಕ್ರಿಪ್ಶನ್​; ಗ್ರೇ ಮಾರುಕಟ್ಟೆಯಲ್ಲಿ ಡಬಲ್​ ರೇಟ್​; ಡಿಜಿಟಲ್​ ಸರ್ವೀಸ್​ ಕಂಪನಿಯ ಐಪಿಒಗೆ ಅಪಾರ ಬೇಡಿಕೆ

    ದೇಶದ ಸ್ವಾತಂತ್ರಕ್ಕಾಗಿ ಲಕ್ಷಾಂತರ ಹೋರಾಟಗಾರರು ಜೀವವನ್ನು ಅರ್ಪಿಸಿದ್ದಾರೆ. ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಸಹ ದೇಶಪ್ರೇಮ ಹಾಗೂ ಹೋರಾಟ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಜತೆಗೆ ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂದರು. ಉಪನ್ಯಾಸಕರಾದ ಮಲ್ಲಿಕಾರ್ಜುನ, ಇಮಾಮಸಾಬ ಹಾಗೂ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts