More

    ವಿದ್ಯಾರ್ಥಿಗಳು ಪರಿಸರ ಸಂರಕ್ಷಣಗೆ ಮುಂದಾಗಿ : ಉದ್ಯಮಿ ಹರಪಳ್ಳಿ ರವೀಂದ್ರ ಸಲಹೆ

    ಕೊಡಗು : ಅಭಿವೃದ್ದಿಯ ಹೆಸರಿನಲ್ಲಿ ಮರಗಿಡಗಳನ್ನು ಕಡಿಯುತ್ತಿರುವುದ್ದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಸಮತೋಲನ ಕಳೆದುಕೊಳ್ಳುವಂತಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಉದ್ಯಮಿ ಹರಪಳ್ಳಿ ರವೀಂದ್ರ ಅಭಿಪ್ರಾಅಯ ಪಟ್ಟರು.


    ಆಲೂರು ಸಿದ್ದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ವನಸಿರಿ ಇಕೋ ಕ್ಲಬ್, ಅರಣ್ಯ ಇಲಾಖೆ ಆಶ್ರಯದಲ್ಲಿ, ಶಿಕ್ಷಣ ಇಲಾಖೆಯ ಸಸ್ಯ ಶ್ಯಾಮಲ ಮತ್ತು ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.


    ಪರಿಸರ ನಾಶದಿಂದ ಹವಾಗುಣ ಬದಲಾಗುತ್ತಿದ್ದು, ಪ್ರತಿಯೊಬ್ಬರು ಮರಗಿಡಗಳನ್ನು ಬೆಳೆಸಿ ಪೋಷಿಸಬೇಕು. ವಿದ್ಯಾರ್ಥಿಗಳು ವಿವೇಕಾನಂದರಂತಹ ಆದರ್ಶ ಪುರುಷರ ಕುರಿತು ಅಧ್ಯಯನ ಮಾಡುವ ಮೂಲಕ ಅವರ ವ್ಯಕ್ತಿತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

    ಹಿರಿಯ ಉಪನ್ಯಾಸಕ ಗಣಪತಿ ಭಟ್ ಮಾತನಾಡಿ, ಆಧುನಿಕಯುಗದಲ್ಲಿ ಅಂತರ್ಜಾಲ ಅಭಿವೃದ್ದಿಯಾಗುತ್ತಿದೆ. ಅಂತರ್ಜಲ ಪ್ರಮಾಣ ಕುಸಿಯುತ್ತಿದೆ ಎಂದು ವಿಷಾದ ವ್ಯಕ್ತ ಪಡಿಸಿದರು.


    ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ.ಪೂ.ಕಾಲೇಜು ಪ್ರಾಂಶುಪಾಲ ಕೆ.ಎಂ.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ, ಉಪನ್ಯಾಸಕಿ ರಾಘವಿ, ಶಿಕ್ಷಕ ಎ.ಎಸ್.ಶ್ರುತಿ, ಶಿವಕುಮಾರ್, ಜವರಯ್ಯ, ಮಂಜಯ್ಯ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts