More

    ವಿದ್ಯಾರ್ಥಿಗಳು ಯೋಗಾಭ್ಯಾಸ ರೂಢಿಸಿಕೊಳ್ಳಲಿ

    ಮಂಡ್ಯ: ರಥ ಸಪ್ತಮಿ ಪ್ರಯುಕ್ತ ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಜಿ.ಮಾದೇಗೌಡ ಸ್ಮಾರಕ ಕ್ರೀಡಾಂಗಣದಲ್ಲಿ ಜಿ.ಮಾದೇಗೌಡ ನ್ಯಾಚಿರೋಥೆರಪಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ವತಿಯಿಂದ ‘ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.


    ಕಾರ್ಯಕ್ರಮವನ್ನು ಭಾರತಿ ಹೆಲ್ತ್ ಸೈನ್ಸ್‌ಸ್ ನಿರ್ದೇಶಕ ಡಾ. ತಮಿಜ್ ಮಣಿ ಉದ್ಘಾಟಿಸಿ ಮಾತನಾಡಿ, ಯೋಗಾಭ್ಯಾಸದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಪ್ರಸ್ತುತ ಸಂದರ್ಭದಲ್ಲಿ ಯೋಗದ ಮಹತ್ವ ಅರಿತು ವಿದೇಶಿಯರೂ ಯೋಗಾಭ್ಯಾಸ ಮಾಡುತ್ತಿದ್ದಾರೆ ಎಂದು ಹೇಳಿದರು.


    ದಿನ ಅರ್ಧ ಗಂಟೆಯಾದರೂ ಯೋಗಾಭ್ಯಾಸ ಮಾಡುವುದರಿಂದ ದೇಹ ಸದೃಢವಾಗಿರಲು ಸಹಕಾರಿಯಾಗುತ್ತದೆ. ಯೋಗವು ರೋಗಗಳು ಸುಳಿಯದಂತೆ ನೋಡಿಕೊಳ್ಳುತ್ತದೆ. ವೈದ್ಯಕೀಯ ಕ್ಷೇತ್ರದಲ್ಲೂ ಯೋಗದ ಮಹತ್ವ ಸಾಬೀತಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನ ಆಚರಿಸುವ ಮೂಲಕ ವಿಶ್ವದ ನೂರಾರು ದೇಶಗಳು ಯೋಗ ಪ್ರದರ್ಶನ ಮಾಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

    ದಿನ ಸೂರ್ಯ ನಮಸ್ಕಾರ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಕಾಯಿಲೆಗಳನ್ನು ದೂರ ಮಾಡಬಹುದು ಈ ಹಿನ್ನೆಲೆಯಲ್ಲಿ ವಿದ್ಯಾಥಿಗಳು ಸೂರ್ಯ ನಮಸ್ಕಾರ ಅಭ್ಯಾಸ ಮಾಡಿಕೊಳ್ಳುವಂತೆ ಸಲಹೆ ನೀಡಿದರು.


    ಕಾರ್ಯಕ್ರಮದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ನೂರೆಂಟು ಸೂರ್ಯ ನಮಸ್ಕಾರ ಮಾಡಿ ಗಮನ ಸೆಳೆದರು. ಪ್ರಾಂಶುಪಾಲ ಡಾ.ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು.
    ಭಾರತೀ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಬಾಲಸುಬ್ರಮಣ್ಯಂ, ವಿವಿಧ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ಕುಮಾರ್ ಜಿ.ಲೋನಿ, ಡಾ.ಮಂಜು ಎಂ.ಬೇಕಬ್, ಡಾ.ಸುಬ್ರಮಣ್ಯಂ ಇತರರು ಇದ್ದರು.

    ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ನ್ಯಾಚ್ಯೋಥರಪಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನಿಂದ ಆಯೋಜಿಸಿದ್ದ ‘ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಭಾರತಿ ಹೆಲ್ತ್ ಸೈನ್ಸ್‌ಸ್ ನಿರ್ದೇಶಕ ಡಾ. ತಮಿಜ್ ಮಣಿ ಉದ್ಘಾಟಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts