More

    ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಟ್ಯಾಬ್ ವಿತರಣೆ – ಸಚಿವ ಗೋವಿಂದ ಕಾರಜೋಳ

    ಬೆಳಗಾವಿ: ಕರೊನಾ ಸಂಕಷ್ಟ, ಲಾಕ್‌ಡೌನ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್‌ಗಳಿಗೆ ಅನುಕೂಲವಾಗಲು ಹಾಗೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಉದ್ದೇಶದೊಂದಿಗೆ ಸರ್ಕಾರ ಟ್ಯಾಬ್ ವಿತರಣೆ ಯೋಜನೆ ಜಾರಿಗೆ ತಂದಿದೆ. ನೀಡಿರುವ ಟ್ಯಾಬ್ ಬಳಸಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಯಾವುದೇ ಕಾರಣಕ್ಕೂ ದುರುಪಯೋಗ ಮಾಡಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.

    ರಾಜ್ಯದಲ್ಲಿ 430 ಕಾಲೇಜ್ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 22 ಕಾಲೇಜ್‌ನ 6,020 ವಿದ್ಯಾರ್ಥಿಗಳಿಗೆ ಸುಮಾರು 14 ಸಾವಿರ ರೂ. ಮೊತ್ತದ ಟ್ಯಾಬ್ ವಿತರಿಸಲಾಗುತ್ತಿದೆ. ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿ ಆನ್‌ಲೈನ್ ಕ್ಲಾಸ್‌ನ ಸದುಪಯೋಗ ಮಾಡಿಕೊಳ್ಳಬೇಕು.

    ಕೋವಿಡ್ ಸಂದರ್ಭದಲ್ಲಿಯೂ ಸಹ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿದೆ ಎಂದು ಸಚಿವ ಕಾರಜೋಳ ತಿಳಿಸಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಎಚ್.ವಿ. ದರ್ಶನ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕಾಲೇಜ್‌ನ ಪ್ರಾಂಶುಪಾಲ ಪ್ರೊ.ಸಿ.ಈಶ್ವರಚಂದ್ರ, ಪ್ರೊ. ಮಂಜುನಾಥ ಪೂಜೇರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts