More

    ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಬೇಡ

    ಸಾಗರ: ಗ್ರಾಮೀಣ ಭಾಗದಲ್ಲಿ ಇಂಟರ್​ನೆಟ್ ಸೌಲಭ್ಯ ಕಲ್ಪಿಸಿದ ನಂತರ ಆನ್​ಲೈನ್ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಿ. ಗ್ರಾಮೀಣ ಪ್ರದೇಶದಲ್ಲಿ ಇಂಟರ್​ನೆಟ್ ಸೌಲಭ್ಯ ಸರಿಯಾಗಿ ಇಲ್ಲದಿರುವುದರಿಂದ ಶಿಕ್ಷಣ ಸಚಿವರ ಹೇಳಿಕೆ ಹಾಸ್ಯಾಸ್ಪದ ಎಂದು ಶಾಸಕ ಹರತಾಳು ಹಾಲಪ್ಪ ಆಕ್ಷೇಪ ವ್ಯಕ್ತಪಡಿಸಿದರು.

    ತಾಲೂಕಿನ ಉಳ್ಳೂರು ಗ್ರಾಪಂ ವ್ಯಾಪ್ತಿಯ ಕಾನುಗೋಡು ಗ್ರಾಮದಲ್ಲಿ 50 ಲಕ್ಷ ರೂ. ಅನುದಾನದಲ್ಲಿ ನಿರ್ವಿುಸಿದ ಸಿಮೆಂಟ್ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿ, ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುವುದು ಬೇಡ ಎಂದರು.

    ಸಚಿವರಾದ ಸುರೇಶ್​ಕುಮಾರ್, ಅಶ್ವತ್ಥ್​ನಾರಾಯಣ, ಡಾ. ಸುಧಾಕರ್ ಬೆಂಗಳೂರಿನ ರೀತಿ ಆಲೋಚಿಸುತ್ತಾರೆ. ಮಲೆನಾಡಿನ ಸ್ಥಿತಿಗತಿ ಬಗ್ಗೆ ಅವರಿಗೆ ಅರಿವಿಲ್ಲ. ಆನ್​ಲೈನ್ ಶಿಕ್ಷಣ ವ್ಯವಸ್ಥೆಯಿಂದ ಆಗುವ ಅನನುಕೂಲದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಹೇಳಿದರು.

    ವರ್ಕ್ ಫ್ರಂ ಹೋಂ, ಆನ್​ಲೈನ್ ಶಿಕ್ಷಣ ವ್ಯವಸ್ಥೆ ಜಾರಿಗೆ ತರುವುದಾಗಿ ಸಚಿವರು ಹೇಳುತ್ತಿದ್ದಾರೆ. ಟವರ್ ವ್ಯವಸ್ಥೆ, ಇಂಟರ್​ನೆಟ್ ಸೌಲಭ್ಯ ಕಲ್ಪಿಸದೆ ಸುಳ್ಳು ಭರವಸೆ ನೀಡಬಾರದು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಜನತೆ ಕರೊನಾ ಲಾಕ್​ಡೌನ್ ಸಂದರ್ಭದಲ್ಲಿ ವರ್ಕ್ ಫ್ರಂ ಹೋಂಗೆ ಹರಸಾಹಸಪಟ್ಟರು. ಮಳೆಗಾಲದಲ್ಲಿ ಅದು ಸಾಧ್ಯವಾಗುವುದಿಲ್ಲ. ಇಂತಹ ಸ್ಥಿತಿಯಲ್ಲಿ ಆನ್​ಲೈನ್ ಶಿಕ್ಷಣ ಹೇಗೆ ಕೊಡುತ್ತಾರೆಂಬುದನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು.

    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಇಂಟರ್​ನೆಟ್ ಸೌಲಭ್ಯ ಸರಿಪಡಿಸಲು ಶ್ರಮಿಸುತ್ತಿದ್ದಾರೆ. ಆದರೆ ಅದು ಫಲಪ್ರದವಾಗಿಲ್ಲ ಎಂದು ತಿಳಿಸಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಚೇತನ್​ರಾಜ್ ಕಣ್ಣೂರು, ಗೌತಮ್ ವಿನಾಯಕ ರಾವ್, ಬಿ.ಟಿ.ರವೀಂದ್ರ, ಗ್ರಾಮಸ್ಥರಾದ ರಾಘವೇಂದ್ರ, ನಾರಾಯಣಮೂರ್ತಿ, ಬಿ.ಎನ್.ಶ್ರೀಕರ್, ಸುಬ್ರಹ್ಮಣ್ಯ, ವಿನಯಕುಮಾರ್, ಜಿ.ಪಿ.ಶ್ರೀಕಾಂತ್, ಪ್ರಭಾಕರ್ ಶೆಟ್ಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts