More

    ವಿದ್ಯಾರ್ಥಿಗಳ ಸುರಕ್ಷತೆಯತ್ತ ಕಾಳಜಿ ವಹಿಸಬೇಕು

    ಚಿತ್ತಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಜೂ.25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಕರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಹಸೀಲ್ದಾರ್ ಉಮಾಕಾಂತ ಹಳ್ಳೆ ಹೇಳಿದರು.
    ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮ ಢವಳಗಿ ಮಾತನಾಡಿ, ಚಿತ್ತಾಪುರ, ಕಾಳಗಿ, ಶಹಾಬಾದ ಸೇರಿ ತಾಲೂಕಿನಲ್ಲಿ 25 ಪರೀಕ್ಷಾ ಕೇಂದ್ರಗಳನ್ನಾಗಿ ಸ್ಥಾಪಿಸಲಾಗಿದೆ. ಅದರಲ್ಲಿ 5,626 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ಊಟ, ನೀರು ತರಬೇಕು ಎಂದು ಹೇಳಿದರು.
    ಶಾಸಕ ಪ್ರಿಯಾಂಕ್ ಖರ್ಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 6 ಸಾವಿರ ಮಾಸ್ಕ್ಗಳನ್ನು ನೀಡಲಿದ್ದಾರೆ. ಸ್ಕೌಟ್ಸ್ ಮತ್ತು ಗೌಡ್ಸ್ ಹಾಗೂ ಅಜೀಂ ಪ್ರೇಮ್ಜೀ ಫೌಂಡೇಶನ್ ವತಿಯಿಂದ 6 ಸಾವಿರ ಮಾಸ್ಕ್ಗಳನ್ನು ನೀಡಲಿದ್ದಾರೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಸಾರಿಗೆ ಬಸ್ ಹಾಗೂ ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
    ಶಹಬಾದ ತಹಸೀಲ್ದಾರ್ ಸುರೇಶ ವರ್ಮಾ , ಕಾಳಗಿ ತಹಸೀಲ್ದಾರ್ ನೀಲಪ್ರಭಾ, ಸಿಪಿಐ ಪಂಚಾಕ್ಷರಿ ಸಾಲಿಮಠ, ಬಸ್ ಘಟಕ ವ್ಯವಸ್ಥಾಪಕ ವಿಠ್ಠಲ್ರಾವ್ ಕದಂ, ಶಹಾಬಾದ ತಾಪಂ ಇಒ ಲಕ್ಷ್ಮಣ ಶೃಂಗೇರಿ, ಸ್ಕೌಟ್ಸ್ ಮತ್ತು ಗೌಡ್ಸ್ನ ನೋಡಲ್ ಅಧಿಕಾರಿ ಸಾವಿತ್ರಿ ಪಾಟೀಲ್ ಮಾತನಾಡಿದರು.
    ಚಿತ್ತಾಪುರ ತಾಪಂ ಇಒ ಡಾ. ಬಸಲಿಂಗಪ್ಪ ಡಿಗ್ಗಿ, ಸಿಪಿಐಗಳಾದ ಭೋಜರಾಜ ರಾಠೋಡ, ಅಮರೇಶ್ವರ್, ಬಿಆರ್ಸಿ ಮಲ್ಲಿಕಾರ್ಜುನ ಸೇಡಂ, ದೇವಿಂದ್ರರೆಡ್ಡಿ ದುಗನೂರ, ಸಂತೋಷ ಶಿರನಾಳ ಇದ್ದರು.
    ಅಶ್ವಿನಿ ಅಗ್ನಿಹೋತ್ರಿ ಪ್ರಾರ್ಥನೆ ಗೀತೆ ಹಾಡಿದರು. ಪರೀಕ್ಷಾ ನೋಡಲ್ ಅಧಿಕಾರಿ ವೆಂಕಟ್ರೆಡ್ಡಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಶರಣಪ್ಪ ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts