More

    ವಿದ್ಯಾರ್ಥಿ ಜೀವನದಲ್ಲೇ ಸಂವಿಧಾನ ಅರಿತುಕೊಳ್ಳಿ

    ರಾಯಬಾಗ: ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಿಧಾನ ಅಭ್ಯಸಿಸಿದರೆ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾ ಗುತ್ತದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಬಸವರಾಜಪ್ಪ ಕೆ.ಎಂ. ಹೇಳಿದರು.

    ಪಟ್ಟಣದ ಮಹಾವೀರ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಸಂವಿಧಾನ ದಿನ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಲಕ್ಷ್ಮೀಸೇನೆ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಬಹುಮಾನ ವಿತರಿಸಿ ಮಾತನಾಡಿದರು.

    ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೆ ಸಮಾನತೆ ಹಕ್ಕು ನೀಡಿದೆ. ಆ ಹಕ್ಕುಗಳಿಂದ ಇನ್ನೊಬ್ಬರಿಗೆ ತೊಂದರೆ ಆಗದಂತೆ ಉಪಯೋಗಿ ಸಿಕೊಳ್ಳಬೇಕು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಬೇಕು ಎಂದರು. ವಕೀಲರ ಸಂಘದ ಅಧ್ಯಕ್ಷ ಆರ್.ಎಚ್.ಗೊಂಡೆ ಮಾತನಾಡಿದರು. ಪ್ರಧಾನ ದಿವಾಣಿ ನ್ಯಾಯಾಧೀಶ ಅಲೋಕ ಎ.ಎನ್., ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ, ಪ್ರಾಚಾರ್ಯ ಮಾಧುರಿ ಜಾಧವ, ವಕೀಲರ ಸಂಘದ ಕಾರ್ಯದರ್ಶಿ ಆರ್.ಎಸ್. ಹೊಳೆಪ್ಪಗೋಳ, ಬಿ.ಆರ್. ಕೋಳಿ, ವಕೀಲ ಎ.ಬಿ. ಪಡೋಲರಕ, ಎಸ್.ಎಂ. ಕಳ್ಳೆ, ಎಸ್.ಬಿ. ಬಿರಾದಾರಪಾಟೀಲ, ಆರ್.ಡಿ. ಶೆಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts