More

    ವಿದ್ಯಾರ್ಥಿ ಬಸ್ ಪಾಸ್‌ಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ

    ಹಾವೇರಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭಿಸಲಾಗಿದೆ.
    ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟ್‌ನಲ್ಲಿ ಐಡಿ ಖ್ಕಿಔಠಿಠಿ://ಛಿಜ್ಞಿಜ್ಠಛ್ಟಿಜ್ಚಿಛಿ.ಚ್ಟ್ಞಠಿ.ಜಟ.ಜ್ಞಿ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೇ ಕರ್ನಾಟಕ-ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕ ಪಾವತಿಸಬೇಕು. ರಾಜ್ಯದ ಮಹಿಳೆಯರಿಗೆ, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರ ಸೇರಿದಂತೆ ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಮಾಣ ಸೌಲಭ್ಯವಿದೆ.
    ಹಾವೇರಿ ವಿಭಾಗದ ವ್ಯಾಪ್ತಿಯ 11 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಠಿಠಿ://ಛಿಜ್ಞಿಜ್ಠಛ್ಟಿಜ್ಚಿಛಿ.ಚ್ಟ್ಞಠಿ.ಜಟ.ಜ್ಞಿ/ಚ್ಠಿಛ್ಟಿಜ್ಚಿಛಿ ನಲ್ಲಿ ಸಂಪರ್ಕಿಸಬಹುದು.
    ಹತ್ತು ತಿಂಗಳ ಅವಧಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ ಸಾಮಾನ್ಯ ವರ್ಗದವರಿಗೆ 150 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 150 ರೂ., ಪ್ರೌಢಶಾಲಾ ಬಾಲಕರಿಗೆ 750 ರೂ., ಬಾಲಕಿಯರಿಗೆ 550 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 150 ರೂ., ಕಾಲೇಜು/ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಾಮಾನ್ಯ ವರ್ಗದವರಿಗೆ 1,050 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 150 ರೂ. ನಿಗದಿಪಡಿಸಲಾಗಿದೆ.
    ಐಟಿಐ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 12 ತಿಂಗಳವರೆಗೆ ಪಾಸ್ ಪಡೆಯಲು ಸಾಮಾನ್ಯ ವರ್ಗದವರಿಗೆ 1,310 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 160 ರೂ. ನಿಗದಿಪಡಿಸಲಾಗಿದೆ. ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪಾಸ್ ಪಡೆಯಲು ಸಾಮಾನ್ಯ ವರ್ಗದವರಿಗೆ 1,550 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 150 ರೂ. ಹಾಗೂ ಸಂಜೆ ಕಾಲೇಜು/ ಪಿಎಚ್.ಡಿ. ಸಾಮಾನ್ಯ ವರ್ಗದವರಿಗೆ 1,350 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 150 ರೂ. ನಿಗದಿಪಡಿಸಲಾಗಿದೆ ಎಂದು ವಾಕರಸಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts