More

    ವಿದ್ಯಾರ್ಥಿ ವೇತನ ಬಿಡುಗಡೆಗೆ ಎಬಿವಿಪಿ ಕಾರ್ಯಕರ್ತರ ಆಗ್ರಹ

    ವಿಜಯಪುರ : ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಕರೊನಾ ಮಹಾಮಾರಿಯಿಂದ ಇಡೀ ಜಗತ್ತೆ ತಲ್ಲಣಗೊಂಡು ಜನಜೀವನ ಅಸಹಜ ಸ್ಥಿತಿಯನ್ನು ಎದುರಿಸಬೇಕಾಗಿದೆ. ಈ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ನಿಂತಿದ್ದವು. ಇತ್ತೀಚೆಗೆ ಶಾಲಾ-ಕಾಲೇಜುಗಳು ಆರಂಭವಾಗಿ ಮತ್ತೆ ಶೈಕ್ಷಣಿಕ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರುಸುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆಹರಿಸಬೇಕು. ವಿದ್ಯಾರ್ಥಿವೇತನ ಬಿಡುಗಡೆಗೊಳಿಸಿ ರಾಜ್ಯದ ಬಡ-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಶಿಕ್ಷಣದಿಂದ ವಂಚಿತರಾಗದಂತೆ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ತಿಳಿಸಿದರು. ಸರ್ಕಾರವು ನೀಡುತಿದ್ದ ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ಕರೊನಾ ಕಷ್ಟಕಾಲದಲ್ಲಿ ತಲುಪದಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಸಮಸ್ಯೆಯಾಗಿದೆ. ಮನೆಯಲ್ಲಿ ಕಷ್ಟದ ವಾತಾವರಣದ ಸಂದರ್ಭದಲ್ಲಿ ಹಾಸ್ಟೆಲ್‌ಗಳು ತೆರೆಯದಿರುವುದು ಮತ್ತು ವಿದ್ಯಾರ್ಥಿವೇತನ ದೊರೆಯದಿರುವುದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ತಕ್ಷಣ ಸರ್ಕಾರ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಸಂಚಾಲಕ ಬಸವರಾಜ ಪೂಜಾರಿ, ತಾಲೂಕು ಸಂಚಾಲಕ ಅಕ್ಷಯ ಯಾದವಾಡ, ವಿದ್ಯಾರ್ಥಿ ಮುಖಂಡರಾದ ಸಿದ್ದು ಪತ್ತಾರ, ವಿನೋದ ಮಣ್ಣೊಡ್ಡರ, ಪಾಂಡು ಮೊರೆ, ಬಸವರಾಜ ಲಗಳಿ, ಮಹಾಂತೇಶ ಕಂಬಾರ, ಮಂಜುನಾಥ ದಾಶ್ಯಾಳ, ಮಂಜುನಾಥ ಹಳ್ಳಿ, ಸಿದ್ದು ಘೋಡೆಕರ, ಸಂಜು ಘೋಡೆಕರ, ಮಾಳು ಪೂಜಾರಿ, ನಿಕಿತಾ ರಾಠೋಡ, ಸ್ವಾತಿ ಮಸೂತಿ, ಲಕ್ಷ್ಮೀ ಚವ್ಹಾಣ, ಅಂಜಲಿ ವಡ್ಡರ, ವೈಷ್ಣವಿ ಪಾಟೀಲ, ಸುನೀಲ ಕಬಾಡೆ, ಗಣೇಶ ಬಸನಾಳ, ರಾಕೇಶ ಚವ್ಹಾಣ ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts