More

    ವಿದ್ಯುತ್ ಅವಘಡದಿಂದ ಅಪಾರ ಬೆಳೆ ಹಾನಿ

    ಆಲೂರು: ತಾಲೂಕಿನ ಬಾವಸವಳ್ಳಿ ಗ್ರಾಮದಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 2 ಎಕರೆ ಬೆಳೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
    ಕುಮಾರ್ ಎಂಬವರಿಗೆ ಸೇರಿದ 4 ಎಕರೆ ಜಮೀನಿನ ಪೈಕಿ 2 ಎಕರೆಯಲ್ಲಿ ಬೆಳೆದಿರುವ ಕಾಫಿ, ಮೆಣಸು, ಸಿಲ್ವರ್ ಮರಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಜಮೀನಿನ ಮಾಲೀಕರು ಮತ್ತು ಸುತ್ತಮುತ್ತಲಿನ ಜನರು ನಂದಿಸಲು ಹರಸಾಹಸಪಟ್ಟರು. ಆದರೆ ಬೆಂಕಿ ತೀವ್ರತೆ ಹೆಚ್ಚಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಸುಟ್ಟುಹೋಗಿದೆ. ಅಗ್ನಿಶಾಮಕ ಠಾಣೆಗೆ ದೂರವಾಣಿ ಮೂಲಕ ವಿಷಯ ತಿಳಿಸಿದರೂ ಹಾಸನದಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಗ್ರಾಮಕ್ಕೆ ಬರುವಷ್ಟರಲ್ಲಿ ಬೆಳೆ ಸುಟ್ಟು ಭಸ್ಮವಾಗಿತ್ತು.
    ಅಗ್ನಿ ಅವಘಡದಲ್ಲಿ 1600 ಕಾಫಿ ಗಿಡ, 400 ಸಿಲ್ವರ್ ಮರ, 400 ಮೆಣಸಿನ ಬಳ್ಳಿಗಳು ಬೆಂಕಿಗಾಹುತಿಯಾಗಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಸಂಬಂಧಪಟ್ಟವರು ಸೂಕ್ತ ಪರಿಹಾರ ಕೊಡಬೇಕು ಎಂದು ಕುಮಾರ್ ಆಗ್ರಹಿಸಿದ್ದಾರೆ.
    ಅಗ್ನಿಶಾಮಕ ವಾಹನ ನಿಲುಗಡೆಗೆ ಆಗ್ರಹ: ಬೇಸಿಗೆ ಸಮಯವಾಗಿರುವುದರಿಂದ ತಾಲೂಕಿನಲ್ಲಿ ಅಗ್ನಿ ಅವಘಡಗಳು ಆಗಾಗ್ಗೆ ಸಂಭವಿಸುತ್ತಿವೆ. ಅಗ್ನಿ ಅವಘಡ ಸಂಭವಿಸಿದಾಗ ಹಾಸನದಿಂದ ವಾಹನ ಬರುವಷ್ಟರಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿರುತ್ತವೆ. ಆದ್ದರಿಂದ ಮುಂಜಾಗ್ರತೆಯಾಗಿ ಬೇಸಿಗೆ ಮುಗಿಯುವರೆಗೆ ಆಲೂರಿನಲ್ಲಿ ಅಗ್ನಿ ಶಾಮಕ ವಾಹನದ ಸೌಲಭ್ಯ ಒದಗಿಸಬೇಕು. ಆಲೂರಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಇತ್ತೀಚೆಗಷ್ಟೇ ಭೂಮಿಪೂಜೆ ನಡೆದಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇದು ತ್ವರಿತಗತಿಯಲ್ಲಿ ಮುಗಿದು ಸಾರ್ವಜನಿಕರ ಅನುಕೂಲಕ್ಕೆ ಅವಕಾಶ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಶಾಸಕರು ಗಮನಹರಿಸಬೇಕು ಎಂದು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts