More

    ವಿದ್ಯುತ್ ಖಾಸಗೀಕರಣ ನಿಲ್ಲಿಸಿ

    ಬೆಳಗಾವಿ: ವಿದ್ಯುತ್ ಖಾಸಗೀಕರಣ ನೀತಿ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ಸದಸ್ಯರು ಸೋಮವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟಿಸಿದರು.

    ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ತರುತ್ತಿದೆ. ಇದೀಗ ವಿದ್ಯುತ್ ಖಾಸಗೀಕರಣ ಮಾಡುತ್ತಿದೆ. ರೈತ-ಜನವಿರೋಧಿ ನೀತಿ ಕೈ ಬಿಡಬೇಕು ಎಂದು ಆಗ್ರಹಿಸಿ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಚೂನಪ್ಪ ಪೂಜಾರಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನುಗಳಿಂದ ರೈತ ಕುಟುಂಬಗಳು ಬೀದಿಗೆ ಬರುತ್ತಿವೆ.

    ದೆಹಲಿಯಲ್ಲಿ ಹೋರಾಟ ಆರಂಭವಾಗಿ 9 ತಿಂಗಳು ಆಗಿವೆ. ಇಂತಹ ಸಮಯದಲ್ಲಿ ಇದೀಗ ವಿದ್ಯುತ್ ಖಾಸಗೀಕರಣ ಮಾಡಲು ಹೊರಟಿರುವುದು ಸರಿ ಅಲ್ಲ. ಇದು ರೈತ ವಿರೋಧಿ ಸರ್ಕಾರ ಎಂದು ಆರೋಪಿಸಿದರು. ಬಳಿಕ ಮಹಿಳಾ ರೈತ ಮುಖಂಡೆ ಜಯಶ್ರೀ ಗುರಣ್ಣವರ ಮಾತನಾಡಿ, ಜನವಿರೋಧಿ ನೀತಿಗಳ ಮೂಲಕ ರೈತರು, ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡುತ್ತಿರುವ ಸರ್ಕಾರಕ್ಕೆ ಉಳಿಗಾಲ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರಕಾಶ ನಾಯಕ, ರಾಘವೇಂದ್ರ ನಾಯಕ, ರುದ್ರಪ್ಪ ಕೊಡ್ಲಿ, ಭರಮು ನಾಯಕ, ಬಬನ್ ಮಲಾಯಿ, ಮಲ್ಲಿಕಾ ವಾಘಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts