More

    ವಿದ್ಯುತ್ ತಂತಿ ತುಳಿದು ರೈತ ಸಾವು

    ಹಾವೇರಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಹಾನಗಲ್ಲ ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ನಡೆದಿದೆ.
    ಗ್ರಾಮದ ಪ್ರಭು ಹಂಚಿನಮನಿ (42) ಮೃತಪಟ್ಟವರು. ಜಮೀನಿನಲ್ಲಿ ಇದ್ದ ವಿದ್ಯುತ್ ಪರಿವರ್ತಕದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದರಿಂದ ಈ ದುರ್ಘಟನೆ ನಡೆದಿದೆ. ನಿನ್ನೆ ಸಂಜೆ ವೇಳೆಯಲ್ಲಿ ಜಮೀನಿಗೆ ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts