More

    ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ

    ಯಾದಗಿರಿ: ಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ., ತಿಳಿಸಿದರು.

    ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಲ್ಲದೇ ಮತದಾರರು ವೆಬ್ಸೈಟ್ನಲ್ಲೂ ಸಹ ಪರಿಶೀಲಿಸಬಹುದು. ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು. ಸ್ಥಳಾಂತರ, ಪುನರಾವರ್ತನೆ ಅಥವಾ ಮೃತ ಹೊಂದಿದ್ದಲ್ಲಿ ಹೆಸರು ತೆಗೆದು ಹಾಕಲು ನಮೂನೆ-7ರಲ್ಲಿ, ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8ರಲ್ಲಿ ಸೂಕ್ತ ದಾಖಲೆಯೊಂದಿಗೆ ಅಜರ್ಿ ಸಲ್ಲಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

    ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಕಳೆದ ಡಿಸೆಂಬರ್ 26 ರಂದು ಕಾಲೋಚಿತಗೊಳಿಸಿ, ಅಂತಿಮ ಮತದಾರರ ಪಟ್ಟಿಯನ್ನು ಬರುವ ಜನವರಿ 05 ರಂದು ಪ್ರಕಟಿಸಲಾಗುವುದು. ಜಿಲ್ಲೆಯಲ್ಲಿ ಪುರುಷ 505287, ಮಹಿಳಾ 502829 ಒಟ್ಟು 10,08,116 ಮತರಾರರಿದ್ದಾರೆ. ಪುರುಷ ಅನುಪಾತ 64.31, ಮಹಿಳಾ ಅನುಪಾತ 64 ಒಟ್ಟು 64.16 ಇದೆ. ವಿಶೇಷ ನೋಂದಣಿ ಕಾರ್ಯಕ್ರಮ ನ.18ರಿಂದ ಡಿ.02 ಮತ್ತು 03ರಂದು ಜಿಲ್ಲೆಯ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ರಾಜಕೀಯ ಪಕ್ಷದವರು ಬೂತ್ ಮಟ್ಟದ ಎಜೆಂಟರನ್ನು ನೇಮಿಸಿ ಸಂಬಂಧಪಟ್ಟ ತಹಸೀಲ್ದಾರರಿಗೆ ಹಾಗೂ ಸಹಾಯಕ ಆಯುಕ್ತರಿಗೆ ಪ್ರತಿಯನ್ನು ಸಲ್ಲಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts