More

    ವಿಧಾನಸಭೆಯಲ್ಲಿ ಸೋತವರಿಗೆ ಗ್ರಾಪಂನಲ್ಲಿ ತಕ್ಕ ಪಾಠ

    ಕೋಲಾರ: ವಿಧಾನ ಸಭೆ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದಿರುವ ವ್ಯಕ್ತಿಗೆ ಗ್ರಾಪಂ ಚುನಾವಣೆಯಲ್ಲೂ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

    ನಗರದ ಗೋಲ್ಡನ್ ಪ್ಯಾಲೇಸ್‌ನಲ್ಲಿ ಜೆಡಿಎಸ್‌ನಿಂದ ನೂತನ ಗ್ರಾಪಂ ಸದಸ್ಯರಿಗೆ ಬುಧವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ ಎಂಬುದಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಜನ ಗೆಲ್ಲಿಸಿರುವುದೇ ಸಾಕ್ಷಿ, ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿರುವುದು ಸಂತಸ ಎಂದರು.

    ಕ್ಷೇತ್ರದ 19 ಗ್ರಾಪಂಗಳಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಬೇಕು, ಶೀಘ್ರದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟವಾಗಲಿದೆ, ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಪಕ್ಷದ ಬೆಂಬಲಿತರನ್ನು ಗೆಲ್ಲಿಸಿಕೊಂಡು ಜಿಪಂ, ತಾಪಂ ಚುನಾವಣೆಗೆ ತಯಾರಿ ನಡೆಸಬೇಕು ಎಂದರು.

    ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, 1985ರಲ್ಲಿ ಜನತಾ ಪರಿವಾರದ ಸರ್ಕಾರ ರಚನೆಯಾದಾಗ ಅಬ್ದುಲ್ ನಜೀರ್ ಸಾಬ್ ಅವರ ಕನಸಿನಂತೆ ರಚನೆಯಾದ ಪಂಚಾಯಿತಿ ವ್ಯವಸ್ಥೆ, ಅಧಿಕಾರ ವಿಕೇಂದ್ರೀಕರಣದಿಂದಾಗಿ ಗ್ರಾಪಂ ಸದಸ್ಯರಿಗೂ ಹೆಚ್ಚಿನ ಹಕ್ಕು ಸಿಕ್ಕಿದೆ ಎಂದರು. ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಶ್ರೀನಿವಾಸಗೌಡ ಅವರನ್ನು ಗೆಲ್ಲಿಸಿಕೊಂಡ ಪರಿಣಾಮ ವರಿಷ್ಠರು ನನಗೆ ಪರಿಷತ್ ಸದಸ್ಯ ಸ್ಥಾನ ಕಲ್ಪಿಸಿಕೊಟ್ಟರು ಎಂದರು.

    ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಆಸೆ ಅಮಿಷಗಳಿಗೆ ಒಳಗಾಗದೆ ಪಕ್ಷ ಗಟ್ಟಿಗೊಳಿಸಬೇಕು. ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಭಿನ್ನಾಭಿಪ್ರಾಯ ಇರಬಾರದು ಎಂದರು.
    ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ವಿಧಾನ ಸಭೆ ವ್ಯಾಪ್ತಿಯ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು ಖುಷಿಯ ವಿಚಾರ. ಪರಾಜಿತ ಅಭ್ಯರ್ಥಿಗಳು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

    ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ, ಶಾಸಕ ಶ್ರೀನಿವಾಸಗೌಡರಿಗೆ ಜಿಲ್ಲೆಯ ಆರು ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಶಕ್ತಿಯಿದೆ, ಗೋವಿಂದರಾಜು ಶಾಸಕರ ಜತೆಗೆ ಕೈ ಜೋಡಿಸಬೇಕು. ಗ್ರಾಪಂ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳನ್ನು ಕೈಬಿಡದೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.

    ನೂತನ ಸದಸ್ಯರನ್ನು ಅಭಿನಂದಿಸಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಚೌಡರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೆ.ವಿ.ದಯಾನಂದ್, ನಾಗನಾಳ ಸೋಮಣ್ಣ, ತಾಲೂಕು ಜೆಡಿಎಸ್ ಅಧ್ಯಕ್ಷ ಬಾಬುಮೌನಿ, ಗ್ರಾಮಾಂತರ ಮಹಿಳಾ ಘಟಕ ಅಧಕ್ಷೆ ಕುರ್ಕಿ ರಾಜೇಶ್ವರಿ, ಜೆಡಿಎಸ್ ಉಪಾಧ್ಯಕ್ಷ ಗೋಪಾಲಕೃಷ್ಣ, ಜಿಲ್ಲಾ ಉಪಾಧ್ಯಕ್ಷ ಮೂರಂಡಹಳ್ಳಿ ಇ.ಗೋಪಾಲ್, ಮುಖಂಡ ಸಿಎಂಆರ್ ಹರೀಶ್, ನಗರಸಭೆ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಪ್ರವೀಣ್‌ಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts