More

    ವಿಧಾನ ಪರಿಷತ್ ಚುನಾವಣೆಗೆ ವೀಕ್ಷಕರ ನೇಮಕ

    ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.

    ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಐಎಎಸ್ ಅಧಿಕಾರಿಗಳಾದ ಟಿ.ಕೆ. ಅನಿಲ್ ಕುಮಾರ್ ಹಾಗೂ ಹರ್ಷ ಗುಪ್ತ ಅವರನ್ನು ಚುನಾವಣಾ ವೀಕ್ಷಕರನ್ನಾಗಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ. ರುದ್ರೇಶ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಅವರನ್ನು ಸಹಾಯಕ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ.

    ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗೆ ಐಎಎಸ್ ಅಧಿಕಾರಿ ಡಾ.ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು, ಅಬಕಾರಿ ಉಪ ಆಯುಕ್ತ ಎಸ್.ನಾಗರಾಜಪ್ಪ ಅವರನ್ನು ಸಹಾಯಕ ಅಧಿಕಾರಿಯಾಗಿ ನೇಮಿಸಲಾಗಿದೆ.
    ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು ಅಥವಾ ಸಂಪರ್ಕಿಸಲು ಮೊ: 7204294565 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts