More

    ವಿನಾಯಕಮೂರ್ತಿ ವಿಸರ್ಜನೆ

    ಅರಕಲಗೂಡು: ಪಟ್ಟಣದ ಐತಿಹಾಸಿಕ ಕೋಟೆ ಕೊತ್ತಲು ಗಣಪತಿ ದೇವಸ್ಥಾನ ಸನ್ನಿಧಿಯಲ್ಲಿ ಪ್ರತಿಷ್ಠಾಪಿಸಿದ್ದ ವಿನಾಯಕಮೂರ್ತಿ ವಿಸರ್ಜನಾ ಮಹೋತ್ಸವ ಶುಕ್ರವಾರ ಅತ್ಯಂತ ಸಡಗರ ಸಂಭ್ರಮಗಳಿಂದ ನೆರವೇರಿತು.

    ಗಣಪತಿ ಸೇವಾ ಸಮಿತಿ ವತಿಯಿಂದ 51ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿ ಸನ್ನಿಧಿಲ್ಲಿ ಕಳೆದ ಹಲವು ದಿನಗಳಿಂದ ಸಾರ್ವಜನಿಕರಿಗಾಗಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು, ಮನರಂಜನೆಗಳು, ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ವಿಸರ್ಜನಾ ಮಹೋತ್ಸವ ಪ್ರಯುಕ್ತ ವಿವಿಧ ಪೂಜಾ ವಿಧಾನಗಳನ್ನು ಸಲ್ಲಿಸಲಾಯಿತು. ಮಧ್ಯಾಹ್ನ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.

    ನಂತರ ಅಲಂಕೃತವಾದ ವಾಹನದಲ್ಲಿ ವಿನಾಯಕ ಮೂರ್ತಿಯನ್ನು ಕೂರಿಸಿ ಬಗೆ ಬಗೆಯ ಹೂವುಗಳಿಂದ ಕಣ್ಣು ಕುಕ್ಕುವಂತೆ ಸಿಂಗರಿಸಲಾಯಿತು. ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆ ಜನಮನ ರಂಜಿಸಿತು.

    ಮೆರವಣಿಗೆಯುದ್ದಕ್ಕೂ ವಿವಿಧ ಕಲಾ ತಂಡಗಳ ಕಲಾವಿದರು ಆಕರ್ಷಕ ವೇಷಭೂಷಣ ತೊಟ್ಟು ಸಾಗಿದ್ದು ಜನರನ್ನು ಆಕರ್ಷಿಸಿತು. ಗಾರುಡಿಗೊಂಬೆ, ಮಹಿಳಾ ಚಿಟ್ಟಿಮೇಳ, ಅಂಜನೇಯಸ್ವಾಮಿ ಮೂರ್ತಿ ವೇಷದಲ್ಲಿ ಗಮನ ಸೆಳೆದರು. ಕೋಳಿ, ಹುಂಜಗಳ ಗೊಂಬೆ ವೇಷಗಳು ಹಾಗೂ ಅನಕೃ, ಅಂಬೇಡ್ಕರ್, ಬಸವಣ್ಣ, ಕನಕದಾಸ, ಭಗೀರಥ ಮಹರ್ಷಿಯ ಸ್ಥಬ್ಧಚಿತ್ರಗಳು ಮೆರವಣಿಗೆಗೆ ಮೆರಗು ನೀಡಿದವು. ಡಿಜೆ ಹಾಡುಗಳಿಗೆ ಯುವಕರು ಕುಣಿದು ಸಂಭ್ರಮಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts