More

    ವಿವಿಗಳಾಗಲಿ ಜ್ಞಾನಾಭಿವೃದ್ಧಿ ಕೇಂದ್ರ – ಡಾ. ಸಿ.ಆರ್. ಕರಿಸಿದ್ದಪ್ಪ

    ಬೆಳಗಾವಿ: ಉತ್ತಮ ಸಂಶೋಧನೆ ಕೈಗೊಳ್ಳುವ ಮೂಲಕ ವಿಶ್ವವಿದ್ಯಾಲಯಗಳು ಜ್ಞಾನಾಭಿವೃದ್ಧಿಯ ಕೇಂದ್ರಗಳಾಗಬೇಕು ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಸಿ.ಆರ್. ಕರಿಸಿದ್ದಪ್ಪ ಅಭಿಪ್ರಾಯಪಟ್ಟರು.

    ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಯೋಜನೆ, ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಮಂಡಳಿ ಹಾಗೂ ಸಮಾಜಕಾರ್ಯ ವಿಭಾಗದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸಂಶೋಧನಾ ಅನುದಾನಕ್ಕಾಗಿ ಪ್ರಸ್ತಾವನೆಗಳು: ಪರಿಣಾಮಕಾರಿ ಬರವಣಿಗೆ ಹಾಗೂ ಮಂಡಿಸುವಿಕೆ ಕೌಶಲಗಳು’ ಎಂಬ ವಿಷಯದ 1 ದಿನದ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಸಂಶೋಧನೆಯ ಮೂಲಕ ಅಭಿವೃದ್ಧಿ, ವಿಕಾಸ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯ. ವಿಶ್ವವಿದ್ಯಾಲಯಗಳು ಸಂಶೋಧನೆ ಕೈಗೊಂಡು ಸಮಾಜದ ಒಳಿತಿಗೆ ಶ್ರಮಿಸಬೇಕು. ಸಂಶೋಧನಾ ಕಾರ್ಯಗಳಿಗೆ ಅನುದಾನ ನೀಡಲು ಹಲವು ಸಂಸ್ಥೆಗಳಿದ್ದು, ಅವುಗಳಿಗೆ ಪ್ರಸ್ತಾಪನೆ ಸಲ್ಲಿಸಿ ಸಂಶೋಧನೆ ಕೈಗೊಳ್ಳುವ ಪ್ರಯತ್ನ ಮಾಡಬೇಕಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಎಂ.ರಾಮಚಂದ್ರ ಗೌಡ ಮಾತನಾಡಿ, ದೇಶದಲ್ಲಿ ಸಂಶೋಧನೆ ಕೈಗೊಳ್ಳಲು ವಿಪುಲ ಅವಕಾಶಗಳಿವೆ. ಅವುಗಳಿಗೆ ಸರಿಯಾದ ರೀತಿಯಲ್ಲಿ ಪ್ರಸ್ತಾಪನೆ ಸಿದ್ಧಪಡಿಸುವ, ಸಲ್ಲಿಸುವಿಕೆಯ ಅವಶ್ಯಕತೆಯಿದೆ.

    ಸಂಶೋಧನಾ ಕ್ಷೇತ್ರದಲ್ಲಿ ವಿಶೇಷವಾಗಿ ಯುವ ಸಂಶೋಧಕರನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ ಎಂದರು. ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ಡಾ.ಅಶೋಕ ಅಸುಂಡಿ, ಪ್ರೊ. ಅಶೋಕ ಡಿಸೋಜಾ, ಸಹಾಯಕ ಪ್ರಾಧ್ಯಾಪಕರಾದ ಡಾ.ಸಂತೋಷ ಪಾಟೀಲ, ಡಾ. ದೇವತಾ ಗಸ್ತಿ, ಸಿದ್ದಲಿಂಗೇಶ್ವರ ಬಿದರಳ್ಳಿ, ವಿದ್ಯಾರ್ಥಿ ಸಂತೋಷ ಬುದಣ್ಣವರ, ಅಶ್ವಿನಿ ಜಾಮುನಿ ಇತರರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts