More

    ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    ಯಾದಗಿರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ಬಿಎಸ್ಪಿ ಪಕ್ಷದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

    ರಾಜ್ಯದಲ್ಲಿ 5 ವರ್ಷಕ್ಕೊಮ್ಮೆ ಸರ್ಕಾರ ಬದಲಾಗುತ್ತಿದ್ದರೂ ಬಡ ಮತ್ತು ಶೋಷಿತ ವರ್ಗದ ಜನರ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತಿಲ್ಲ. ಸಣ್ಣ ಹಾಗೂ ಅತಿ ಸಣ್ಣ ರೈತರ ಜಮೀನಿನ ವ್ಯಾಜ್ಯಗಳಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಆಳುವ ಸರ್ಕಾರಗಳು ಗ್ರಾಮೀಣ ಭಾಗವನ್ನು ಸಂಪೂರ್ಣ ನಿರ್ಲಕ್ಷೃ ಮಾಡಿವೆ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಕುಟುಂಬಗಳು ಸರ್ಕಾರಿ ಜಮೀನಿನಲ್ಲಿ ಕಳೆದ 4 ದಶಕದಿಂದ ಬಗರ್ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಅದರಂತೆ ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ ಮಾಡಿಕೊಂಡ ಬಡ ವರ್ಗದವರಿಗೆ 94ಸಿಸಿ ಅಡಿಯಲ್ಲಿ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

    ಸರ್ಕಾರ ರಾಜ್ಯದಲ್ಲಿನ ಗೋಮಾಳನ್ನು ಖಾಸಗಿ ಅವರಿಗೆ ಮಾರಾಟ ಮಾಡಲು ಮುಂದಾಗಿದ್ದು, ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. 11 ಸಾವಿರಕ್ಕೂ ಹೆಚ್ಚು ಗ್ರಾಮಗಳಲ್ಲಿ ಈವರೆಗೆ ಸ್ಮಶಾನ ಭೂಮಿ ಇಲ್ಲದೆ ತೊಂದರೆಯಾಗುತ್ತಿದೆ. ನ್ಯಾ. ನಾಗಮೋಹನದಾಸ್ ಅವರ ವರದಿ ಸಕರ್ಾರ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

    ಗ್ರಾಮ ಸಹಾಯಕ ಮತ್ತು ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕು. ಹೊಸ ಶಿಕ್ಷಣ ನೀತಿಯಡಿ ಉನ್ನತ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿ ಹಾಗೂ ಪಂಗಡ ವಿದ್ಯಾರ್ಥಿಗಳಿಗೆ ಅವಕಾಶ ತಪ್ಪಿಸಲಾಗಿದ್ದು, ಕೂಡಲೇ ಈ ತಾರತಮ್ಯ ನಿವಾರಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್, ಬಸವರಾಜ ಬೊಂಬಾಯಿ ಸೇರಿದಂತೆ ಇತರರು ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts