More

    ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

    ಕಾರವಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಕಾರ್ವಿುಕ ಸಂಘಟನೆಗಳ ಕಾರ್ಯಕರ್ತೆಯರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.

    ಸಿಐಟಿಯು ಸಂಯೋಜಿತ ಕಾರ್ವಿುಕ ಸಂಘಟನೆಗಳು ನ. 26 ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿವೆ. ಅದಕ್ಕೆ ಪೂರ್ವಭಾವಿಯಾಗಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಮುಖಂಡರು ವಿವರಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯ ಎದುರು ಪ್ರತಿಭಟನಾ ಸಭೆ ನಡೆಸಿದರು. ಬಳಿಕ ಉಪವಿಭಾಗಾಧಿಕಾರಿ ಪ್ರಿಯಾಂಗಾ ಅವರಿಗೆ ಮನವಿ ಸಲ್ಲಿಸಿದರು.

    ಬೇಡಿಕೆಗಳು: ಹೊಸ ಶಿಕ್ಷಣ ನೀತಿಯ ಅಪಾಯ ಹಿಮ್ಮೆಟ್ಟಿಸಬೇಕು. ಶಾಲಾ ಪೂರ್ವ ಶಿಕ್ಷಣವನ್ನು ಅಂಗನವಾಡಿಗಳಲ್ಲೇ ಕಡ್ಡಾಯ ಮಾಡಬೇಕು. ಆಹಾರ, ಆರೋಗ್ಯ ಶಿಕ್ಷಣಕ್ಕಾಗಿ ಅಂಗನವಾಡಿ, ಬಿಸಿಯೂಟ ಯೋಜನೆಯನ್ನು ರಕ್ಷಿಸಿ ಬಲಿಷ್ಠಪಡಿಸಬೇಕು.

    ಕರೊನಾ ಸಂದರ್ಭದ ಬಾಕಿ ವೇತನ ಪಾವತಿಸಬೇಕು. ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಕುಟುಂಬಗಳಿಗೆ ಮಾಸಿಕ 7500 ರೂ. ಗಳನ್ನು ನೀಡಬೇಕು. ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಕಾಯಂ ಮಾಡಬೇಕು. ಎಲ್ಲರಿಗೂ ಉದ್ಯೋಗ ಭದ್ರತೆ, ನಿವೃತ್ತಿ ವೇತನ ಹಾಗೂ ಆರೋಗ್ಯ ಸೌಲಭ್ಯ ಒದಗಿಸಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ರೈತ ಹಾಗೂ ಕಾರ್ವಿುಕ ವಿರೋಧಿ ಕಾಯ್ದೆಗಳ ಜಾರಿಯನ್ನು ಹಿಂಪಡೆಯಬೇಕು ಎಂಬ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.

    ಸಿಐಟಿಯು ಅಧ್ಯಕ್ಷೆ ಎಸ್.ವರಲಕ್ಷ್ಮೀ, ಅಂಗನವಾಡಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಸ್.ಸುನಂದಾ, ಆಶಾ ಮತ್ತು ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ, ಸ್ಥಳೀಯ ಮುಖಂಡರಾದ ಯಮುನಾ ಗಾಂವಕರ್, ಜಯಶ್ರೀ ಹೇರೆಕರ್, ವಿದ್ಯಾ ವೈದ್ಯ, ಗಂಗಾ ನಾಯ್ಕ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts