More

    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

    ಬೆಳಗಾವಿ: ಅತಿವೃಷ್ಟಿ ಬೆಳೆಹಾನಿ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳಗಾರರ ಸಂಘದ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
    ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಬೆಳೆಗಳೆಲ್ಲವೂ ಧಾರಾಕಾರ ಮಳೆಯಿಂದ ಸಂಪೂರ್ಣ ಹಾಳಾಗಿವೆ. ಕೆಲವೆಕಡೆ ಬೆಳೆಗಳು
    ಭೂಮಿಯಲ್ಲಿಯೇ ಕೊಳೆತು ನಾರುತ್ತಿವೆ. ಹಾಗಾಗಿ ಸರ್ಕಾರವು ಕೂಡಲೇ ಬೆಳೆಹಾನಿ ಸಮೀಕ್ಷೆ ನಡೆಸಿ ನೈಜ ನಷ್ಟ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಬೆಳೆಸಾಲ ವಸೂಲಿ ಮಾಡದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

    ಕಬ್ಬು ಉತ್ಪಾದನೆಗೆ ಬಳಸುವ ರಸಗೊಬ್ಬರ, ಪೊಟ್ಯಾಷಿಯಂ ಚೀಲಕ್ಕೆ ಹೆಚ್ಚುವರಿಯಾಗಿ 900 ರೂ. ಡಿಎಪಿ ಬೆಲೆ 350 ರೂ. ಏರಿಕೆಯಾಗಿದೆ. ಕಟಾವು ಕೂಲಿ 400 ರೂ., ಬೀಜದ ಬೆಲೆ ಎಕರೆಗೆ 1000 ರೂ. ಹೆಚ್ಚುವರಿಯಾಗಿ ಏರಿಕೆಯಾಗಿದೆ, ಆದರೆ, ಕೇಂದ್ರ ಸರ್ಕಾರ ಸಕ್ಕರೆ ಇಳುವರಿಯನ್ನು 10.25 ಏರಿಕೆ ಮಾಡಿ 3050 ರೂ. ದರ ನಿಗದಿಮಾಡಿದೆ. ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯವಾಗಿದೆ ಎಂದು ದೂರಿದರು.

    ಬ್ಯಾಂಕ್‌ಗಳು ರೈತರಿಗೆ ಕೃಷಿ ಬೆಳೆಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣೆ ಮಾಡಿ ಸಾಲ ನೀಡುತ್ತಿವೆ. ಈ ಪದ್ದತಿಯನ್ನು ಕೂಡಲೇ ರದ್ದುಪಡಿಸಬೇಕು. ಕೇಂದ್ರ ಮತ್ತು ರಾಜ್ಯಸರ್ಕಾರವು ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ನಿರ್ಲಕ್ಷೃ ಮಾಡಿಕೊಂಡು ಬರುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಅಧ್ಯಕ್ಷ ಕುರುಬೂರು ಶಾಂತಕುಮಾರ್, ಉಪಾಧ್ಯಕ್ಷ ಸುರೇಶ ಪಾಟೀಲ, ಗುರುಸಿದ್ದಪ್ಪ ಕೋಟೆಗೆ, ಎಸ್.ಬಿ.ಸಿದ್ದನಾಳ, ರಮೇಶ ಹಿರೇಮಠ, ಬಿ.ನಾಗರಾಜ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts