More

    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

    ಬೆಳಗಾವಿ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ’ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಜ್ದೂರ್ ನವನಿರ್ಮಾಣ ಸಂಘಟನೆ ಮತ್ತು ಜಾಗೃತ ಮಹಿಳಾ ಒಕ್ಕೂಟದಿಂದ ಜಿಪಂ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಜಿಪಂ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದ ಒಕ್ಕೂಟದ ಪದಾಧಿಕಾರಿಗಳು, ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಲ ಹೊತ್ತು ಪ್ರತಿಭಟಿಸಿದರು.
    ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಕೇಳಿದವರಿಗೆ 15 ದಿನಗಳೊಳಗೆ ಉದ್ಯೋಗ ನೀಡಬೇಕು. ಕೆಲಸ ನಿರ್ವಹಿಸಿದ 15 ದಿನಗಳೊಳಗೆ ಕೂಲಿ ಪಾವತಿಸಬೇಕು. ದಿನಕ್ಕೆ ಎರಡು ಬಾರಿ ಹಾಜರಿ ಹಾಕಿಸಿಕೊಳ್ಳುವ ಪದ್ಧತಿ ನಿಲ್ಲಿಸಬೇಕು. ಉದ್ಯೋಗ ಖಾತ್ರಿ ಗ್ರಾಮಸಭೆ ಮತ್ತು ಸಾರ್ವಜನಿಕ ಲೆಕ್ಕ ಪರಿಶೋಧನೆ ಪುನಃ ಜಾರಿಗೆ ತರಬೇಕು. ಉದ್ಯೋಗ ಖಾತ್ರಿಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕು. ಕಾರ್ಮಿಕರ ಎಲ್ಲ ಸಮಸ್ಯೆಗಳನ್ನು ಆಲಿಸುವ ಮೂಲಕ ಉದ್ಯೋಗ ಖಾತ್ರಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಒತ್ತಾಯಿಸಿ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

    ಶಾರದಾ ದೇಶಪಾಂಡೆ, ಶಿವಾಜಿ ಕಾಗನಿಕರ, ಎನ್.ಆರ್. ಲಾತೂರ, ರಾಹುಲ್ ಪಾಟೀಲ, ಅಡಿವೆಪ್ಪ ಕಣಬರಗಿ, ಕವಿತಾ ಮರಕಟ್ಟಿ, ಬಸವಂತ ಕೋಲೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts