More

    ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

    ಕುಮಟಾ: ತಾಲೂಕಿನ ಅಕ್ಷರ ದಾಸೋಹ ನೌಕರರ ಸಂಘಟನೆಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಶಾಸಕ ದಿನಕರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.

    ಅಕ್ಷರ ದಾಸೋಹ ನೌಕರರನ್ನು ಶಿಕ್ಷಣ ಇಲಾಖೆಯಲ್ಲಿ ಕಾಯಂ ಮಾಡಿ ಶಾಸನಾತ್ಮಕ ಸವಲತ್ತುಗಳನ್ನು ಒದಗಿಸಬೇಕು. ಲಾಕ್​ಡೌನ್​ನಿಂದ ತೊಂದರೆಗೆ ಒಳಗಾಗಿರುವ ಅಕ್ಷರ ದಾಸೋಹ ನೌಕರರಿಗೆ ಕಳೆದ ಏಪ್ರಿಲ್ ತಿಂಗಳಿಂದ ಮುಂದಿನ ಶಾಲೆ ಆರಂಭವಾಗುವವರೆಗೆ ವೇತನ ಪಾವತಿ ಮಾಡಬೇಕು. ಕನಿಷ್ಠ 6 ತಿಂಗಳಿಗೆ ಉಚಿತ ಪಡಿತರ ನೀಡಬೇಕು. ಎಲ್​ಐಸಿ ಆಧಾರಿತ ಪಿಂಚಣಿ ಜಾರಿಗೊಳಿಸಬೇಕು. ಕ್ವಾರಂಟೈನ್​ನಲ್ಲಿ ಇದ್ದವರಿಗೆ ಅಡುಗೆ ಮಾಡಿ ಬಡಿಸುತ್ತಿರುವ ನೌಕರರಿಗೆ ವೇತನ ಪಾವತಿಸಬೇಕು ಎಂದು ಆಗ್ರಹಿಸಲಾಯಿತು.

    ಭಾರತ ರಾಷ್ಟ್ರೀಯ ಕಾರ್ವಿುಕ ಸಮ್ಮೇಳನ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕಾರ್ವಿುಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ ವಿನಾಯಿತಿ, ಬದಲಾಗುವ ಶಿಕ್ಷಣ ವ್ಯವಸ್ಥೆಗೆ ಬೇಕಾದಂತೆ ಸ್ಮಾರ್ಟ್ ಫೋನ್ ಖರೀದಿಸಲು ಸವಲತ್ತು ಒದಗಿಸಬೇಕು. ಕಳೆದ ವರ್ಷ ನೆರೆಯ ಸಂದರ್ಭದಲ್ಲಿ ಸಂತ್ರಸ್ತರಿಗೆ ಅಡುಗೆ ಮಾಡಿದ ಕೂಲಿ ಪಾವತಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ.

    ಈ ವೇಳೆ ಜಿಪಂ ಸದಸ್ಯ ಗಜಾನನ ಪೈ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾ ನಾಯ್ಕ, ಸುನಂದಾ ನಾಯ್ಕ, ಗೀತಾ ಉಪ್ಪಾರ, ನಾಗರತ್ನ ಗೌಡ, ವಿಜಯಾ ನಾಯ್ಕ, ಜಯಂತಿ ಭಂಡಾರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts