More

    ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

    ಬೆಳಗಾವಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಕಟ್ಟಡ ಕಾರ್ಮಿಕರು ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನಾನಾ ಸೌಲಭ್ಯಗಳು ದೊರೆಯುತ್ತವೆ ಎಂದು ಹೆಸರು ನೋಂದಣಿ ಮಾಡಿದ್ದಾರೆ. ಆದರೆ, ಮಂಡಳಿಯಿಂದ ಸೌಲಭ್ಯಗಳು ದೊರೆಯುತ್ತಿಲ್ಲ. ಕಳೆದ ವರ್ಷ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆಗಾಗಿ ದಾಖಲೆ ಸಂಗ್ರಹಿಸಲಾಗಿತ್ತು. ಆದರೆ, ಈವರೆಗೂ ಲ್ಯಾಪ್‌ಟಾಪ್ ನೀಡಿಲ್ಲ. ಕೂಡಲೇ ಲ್ಯಾಪ್‌ಟಾಪ್ ವಿತರಿಸಬೇಕು. ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ದೊರೆಯುವ ಶಿಷ್ಯವೇತನ ನಿಗದಿತ ಸಮಯದಲ್ಲಿ ದೊರೆಯಬೇಕು. ಕಾರ್ಮಿಕರಿಗೆ ನೀಡುವ ಕಿಟ್‌ಗಳ ಬದಲಾಗಿ ಕಿಟ್‌ಗಳ ಖರೀದಿಗೆ ತಗಲುವ ವೆಚ್ಚವನ್ನು ನೇರವಾಗಿ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು.

    ಕಾರ್ಮಿಕರಿಗಿರುವ ವಸತಿ ಯೋಜನೆಯ ಷರತ್ತುಗಳನ್ನು ಸರಳೀಕರಿಸಿ, ಹಿರಿಯ ಕಾರ್ಮಿಕರಿಗೆ ವಸತಿ ಯೋಜನೆಯ ಲಾಭ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. 60 ವರ್ಷ ಪೂರೈಸಿದ ಕಾರ್ಮಿಕರಿಗೆ ಪಿಂಚಣಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

    ಜಿಲ್ಲಾ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎನ್.ಆರ್. ಲಾತೂರ, ಪ್ರಶಾಂತ ಹಿರೇಕರ, ಸುನೀಲ ಗಾವಡೆ, ಸಾಗರ ಪಾಟೀಲ, ಸುಜೀತ ಮುಳಗುಂದ, ರೋಹಿತ ಲಾತೂರ, ಶೀತಲ ಬಿಲಾವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts