More

    ವಿವಿಧ ಬೇಡಿಕೆ ಈಡೇರಿಸಲು ಮನವಿ

    ಕಾರವಾರ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ಎಲ್ಲ ತಹಸೀಲ್ದಾರರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.

    ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. 4 ರಿಂದ 5 ವರ್ಷದ ಮಕ್ಕಳು ಮಾತ್ರ ಬಾಲವಟಿಕಾ ಎಂದರೆ ಅಂಗನವಾಡಿಗೆ ಬರುವ ಬಗ್ಗೆ ಹೊಸ ನೀತಿಯಲ್ಲಿ ಪ್ರಾಸ್ತಾಪವಿದ್ದು, ಇದರಿಂದ ಅಂಗನವಾಡಿಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಸಾಧ್ಯತೆ ಇದೆ. ಇದರಿಂದ ಮೂರ್ನಾಲ್ಕು ದಶಕಗಳಿಂದ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪಾಡೇನು ಎಂಬ ಪ್ರಶ್ನೆ ಹುಟ್ಟಿದೆ. ಈ ನಿಟ್ಟಿನಲ್ಲಿ ಜ.10 ರಿಂದ ಅನಿರ್ಧಿಷ್ಠಾವಧಿ ಧರಣಿ ನಡೆಸಲು ತೀರ್ವನಿಸಲಾಗಿತ್ತು. ಆದರೆ, ಕರೊನಾ ಹಿನ್ನೆಲೆಯಲ್ಲಿ ಧರಣಿ ಕೈಬಿಟ್ಟು ಮನವಿ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

    ಅಂಗನವಾಡಿಯಲ್ಲಿ ಎಲ್​ಕೆಜಿ, ಯುಕೆಜಿ ವ್ಯವಸ್ಥೆ ಜಾರಿಗೆ ತರಬೇಕು. ಅಂಗನವಾಡಿಯಲ್ಲಿ 3 ತಾಸು ಶಾಲಾ ಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಾಲೆಗಳಲ್ಲಿ ಪ್ರಾರಂಭಿಸಿರುವ ಎಲ್​ಕೆಜಿ, ಯುಕೆಜಿ ತರಗತಿಗಳನ್ನು ಬಂದ್ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಐಸಿಡಿಎಸ್​ನ ಐದು ಕಾರ್ಯಗಳನ್ನು ಬಿಟ್ಟು ಉಳಿದ ಕಾರ್ಯಗಳನ್ನು ರದ್ದು ಮಾಡಬೇಕು ಎಂಬುದು ಸೇರಿ 28 ಬೇಡಿಕೆಗಳ ಪಟ್ಟಿ ಸಲ್ಲಿಸಲಾಗಿದೆ. ಯಮುನಾ ಗಾಂವಕರ್, ತಾರಾ ನಾಯ್ಕ, ಮಾಯಾ ಕಾಣೇಕರ್, ಮಂಜುಳಾ ಕಾಣಕೋಣಕರ್, ಮೀನಾ ನಾಯ್ಕ, ವೀಣಾ ಅಸ್ನೋಟಿಕರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts