More

    ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು

    ಸೋಮವಾರಪೇಟೆ: ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇತ್ತೀಚೆಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಜ್ಞಾನವಿಕಾಸ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ. 10ನೇ ತರಗತಿ ವಿದ್ಯಾರ್ಥಿಗಳು ಜಾನಪದ ನೃತ್ಯದಲ್ಲಿ ಪ್ರಥಮ, ಛದ್ಮವೇಷದಲ್ಲಿ ತನುಶ್ರೀ ಪ್ರಥಮ, ಸುಮನಾ ತೃತೀಯ, ಗೀತಾ ಗಾಯನ ಸ್ಪರ್ಧೆಯಲ್ಲಿ ವೈಭವಿ ಪ್ರಥಮ, ಸಮೂಹ ಗೀತಗಾಯನ ಸ್ಪರ್ಧೆಯಲ್ಲಿ ಧನ್ಯಶ್ರೀ ತಂಡ ದ್ವಿತೀಯ ಬಹುಮಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕ ಗಳಿಸಿದ ಪಿ.ಬಿ.ಸಿಂಚನಾ, ಶಮಂತ್ ಮತ್ತು ಕನ್ನಡ ಶಿಕ್ಷಕಿ ಮಂಜುಳಾ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts