More

    ವಿಶೇಷ ಅಧಿವೇಶನ ತಕ್ಷಣ ಕರೆಯಿರಿ

    ಕಲಬುರಗಿ: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಜನರ ನೋವಿಗೆ ಸ್ಪಂದಿಸಲು ಮತ್ತು ಪರಿಹಾರ ಕಾರ್ಯ ಕೈಗೊಳ್ಳಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
    ಭೀಮಾ, ಕಾಗಿಣಾ, ಕೃಷ್ಣಾ ಪ್ರವಾಹದಿಂದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ನೋವಿನ ಕುರಿತು ಚರ್ಚೆ ನಡೆಸುವುದು ಅಗತ್ಯವಾಗಿದೆ ಎಂದು ಅವರು ನೆರೆಪೀಡಿತ ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ತೆರಳುವ ಮುನ್ನ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಜನರು ತೊಂದರೆಗೆ ಸಿಲುಕಿದ್ದರೂ ಸರ್ಕಾರ ನೆರವಿಗೆ ಬರುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅವರ ಜಿಲ್ಲೆಗಳಿಗೆ ಹೋಗುತ್ತಿಲ್ಲ, ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸಂತ್ರಸ್ತರಿಗೆ ಸ್ಪಂದಿಸುವ, ಪರಿಹಾರ ಕೊಡಿಸುವ ಕೆಲಸಗಳಾಗುತ್ತಿಲ್ಲ, ಅಧಿವೇಶನ ಕರೆದು 20 ಜಿಲ್ಲೆಗಳ ಸ್ಥಿತಿಗತಿ ಕುರಿತು ಚರ್ಚಿಸಿ ಪರಿಹಾರ ಕಾರ್ಯ ಚುರುಕುಗೊಳಿಸಬೇಕು ಎಂದು ಒತ್ತಾಯಿಸಿದರು.
    ಪ್ರವಾಹ ಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲಗೊಂಡಿದೆ. ಕೇಂದ್ರ ಸರ್ಕಾರ ನಿರಂತರ ರಾಜ್ಯಕ್ಕೆ ಮೋಸ ಮಾಡುತ್ತಿದೆ. ಬೆಳೆ ನಷ್ಟದಿಂದಾಗಿ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಅವರಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
    15ನೇ ಹಣಕಾಸು ಯೋಜನೆಯಡಿ ರಾಜ್ಯಕ್ಕೆ 5495 ಕೋಟಿ ವಿಶೇಷ ಅನುದಾನ ನೀಡಲು ಆಯೋಗ ಶಿಫಾರಸು ಮಾಡಿತ್ತು. ಆದರೆ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಶಿಫಾರಸು ವಾಪಸ್ ಪಡೆಯುವಂತೆ ಪತ್ರ ಬರೆದಿದ್ದಾರೆ ಎಂದು ಟೀಕಿಸಿದರು.
    ಕಲಬುರಗಿ, ಅಫಜಲಪುರ, ಜೇವರ್ಗಿ , ಚಿತ್ತಾಪುರ ತಾಲೂಕಿನ ಸಂತ್ರಸ್ತರ ಗೋಳು ಹೇಳತೀರದಾಗಿದೆ. ರೈತರಿಗೆ ಪರಿಹಾರ ನೀಡುವುದರ ಜತೆಗೆ ಒಡೆದಿರುವ ಕೆರೆಗಳ ದುರಸ್ತಿ ಮಾಡಬೇಕು. ರಸ್ತೆ, ಸೇತುವೆ ಮರು ನಿರ್ಮಿಸಬೇಕು. ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದರು.
    ವಿಧಾನಸಭೆ ಪ್ರತಿಪಕ್ಷ ಮುಖ್ಯ ಸಚೇತಕ ಡಾ.ಅಜಯಸಿಂಗ್, ಅಫಜಲಪುರ ಶಾಸಕ ಎಂ.ವೈ.ಪಾಟೀಲ್, ಶರಣಪ್ಪ ಮಟ್ಟೂರ, ಮಾಜಿ ಉಪ ಸಭಾಪತಿ ಬಿ.ಆರ್. ಪಾಟೀಲ್ ಇತರರಿದ್ದರು.

     

     

    ಕುಮಾರಸ್ವಾಮಿ ಸಿಎಂ ಆಗಿದ್ದಾಗ ಶಾಸಕರನ್ನು ಮಾತನಾಡಿಸಲಿಲ್ಲ
    ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಅವರನ್ನು ಕರೆದು ಮಾತಾಡಿಸಲಿಲ್ಲ. ಅವರ ಕ್ಷೇತ್ರಗಳಿಗೆ ಅನುದಾನವೂ ಬಿಡುಗಡೆ ಮಾಡಲಿಲ್ಲ. ಬದಲಿಗೆ ಐಷಾರಾಮಿ ಹೋಟೆಲ್ನಲ್ಲಿ ಕುಳಿತು ಅಧಿಕಾರ ನಡೆಸಿದ್ದರಿಂದ ಶಾಸಕರು ಸಕರ್ಾರ ಕೆಡವಿದರು. ಆದರೆ ಅವರು ನಾನೇ ಸಕರ್ಾರ ಬೀಳಿಸಿದೆ ಎನ್ನುತ್ತಿದ್ದಾರೆ. ಅದೇನೋ ಅಂತಾರಲ್ಲ, `ಕುಣಿಯಲು ಬಾರದವರು ನೆಲ ಡೊಂಕು’ ಎಂಬಂತಾಗಿದೆ ಎಚ್ಡಿಕೆ ವರ್ತನೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

    ದಮ್ ಇದ್ದರೆ ಹಣ ತರಲಿ
    ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಹತ್ತು ಪಟ್ಟು ದಮ್ ಇರಲಿ. ಅವರಿಗೆ ಮತ್ತು ರಾಜ್ಯದ 25 ಬಿಜೆಪಿ ಸಂಸದರಿಗೆ ದಮ್ ಇದ್ದರೆ ಪ್ರಧಾನಿ ಮೋದಿ ಮುಂದೆ ಕೂತು ನ್ಯಾಯಯುತವಾಗಿ ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತ ತೆಗೆದುಕೊಂಡು ಬರಲಿ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ದಮ್ ಅನ್ನೋ ಪದಕ್ಕೆ ವಿಶ್ಲೇಷಣೆ ಬೇಕಿಲ್ಲ, ನಾನು ಹೇಳಿದ್ದು ಕೇಂದ್ರದ ನೆರವು ತರುವಲ್ಲಿ ಎಂಬುದನ್ನು ಅರಿತುಕೊಳ್ಳಲಿ ಎಂದರು. ಮೊದಲು ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ವಿಜಯೇಂದ್ರ ಆರ್ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇದು ಟೆಕ್ನಾಲಜಿ ಬೆಳವಣಿಗೆ ಎಫೆಕ್ಟ್ ಎಂದು ಟೀಕಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts