More

    ವಿಹಂಪ, ಮಂತ್ರಾಕ್ಷತೆ ವಿತರಣೆ ಅಭಿಯಾನ

    ಯಾದಗಿರಿ: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಸಂಪರ್ಕ ಅಭಿಯಾನಕ್ಕೆ ಶುಕ್ರವಾರ ನಗರದ ಚಿತ್ತಾಪುರ ರಸ್ತೆಯಲ್ಲಿನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.

    ಇಲ್ಲಿನ ಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮದ ವಿಭಾಗೀಯ ಸಂಚಾಲಕ ಪ್ರಮೋದ ಕುಲಕಣರ್ಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ನಿಂದ ಈ ಅಭಿಯಾನ ನಡೆಯುತ್ತಿದೆ. ಅಯೋಧ್ಯೆಯಲ್ಲಿ ಜನವರಿ 22ರ ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ಸುಮುಹೂರ್ತದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದನ್ನು ಪ್ರತೀ ರಾಮ ಭಕ್ತರು ತಮ್ಮತಮ್ಮ ಊರು, ಮನೆಗಳಲ್ಲಿ ಸಂಭ್ರಮದಿಂದ ಆಚರಿ ಸುವಂತಾಗಲು ಈ ಅಭಿಯಾನ ಆಯೋಜನೆ ಮಾಡಿಲಾಗಿದೆ ಎಂದರು.

    ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಪ್ರತಿಯೊಬ್ಬ ಹಿಂದು ಮನೆಗಳಿಗೆ ನಮ್ಮ ಸಂಚಾಲಕರು ತೆರಳಿ, ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆ ಜತೆಗೆ ರಾಮಮಂದಿರದ ಭಾವಚಿತ್ರ, ಆಮಂತ್ರಣ ಪತ್ರವನ್ನು ವಿತರಿಸಲಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts